ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ: ಮಹಿಳೆ ಸ್ಥಳದಲ್ಲಿಯೇ ಸಾವು

Crime Logo
Published on

ಮಂಡ್ಯ: ತಾಲೂಕಿನ ಹನಕೆರೆ ಗ್ರಾಮದಲ್ಲಿ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ ಹೊಡೆದು ವೃದ್ಧೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ತಾಲೂಕಿನ ಹೊನಗಳ್ಳಿಮಠದ ರಂಗಯ್ಯ ಎಂಬುವರ ಪತ್ನಿ ಬೋರಮ್ಮ(75) ಮೃತ ದುರ್ದೈವಿ. ಈಕೆ ವೃದ್ಯಾಪ್ಯ ವೇತನ ಪಡೆಯುವ ಸಲುವಾಗಿ ನಗರಕ್ಕೆ ಬರುತ್ತಿದ್ದರು. ಈ ವೇಳೆ ರೈಲ್ವೆ ಗೇಟ್ ಹಾಕಿದ್ದ ಹಿನ್ನೆಲೆಯಲ್ಲಿ ಪಕ್ಕದಲ್ಲಿದ್ದ ಕಿರುಗೇಟ್‌ನ ಮೂಲಕ ಹಳಿ ದಾಟಲು ಮುಂದಾಗಿದ್ದಾರೆ. ಈ ಸಮಯದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ರೈಲು ಗಾಡಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net