

ರಾಣೆಬೆನ್ನೂರ: ಮಹಿಳೆಯೊಂದಿಗೆ ನಗರದ ಲಾಡ್ಜ್ವೊಂದರಲ್ಲಿ ಬಂದು ಉಳಿದುಕೊಂಡಿದ್ದ ವ್ಯಕ್ತಿಯೊಬ್ಬ ಮಹಿಳೆಯ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ಸೋಮವಾರ ನಡೆದಿದೆ.
ತಾಲೂಕಿನ ಕಾಕೋಳ ಗ್ರಾಮದ ಮೈಲಾರಪ್ಪ ರುದ್ರಪ್ಪ ಕರಬಣ್ಣನವರ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಈತ ಭಾನುವಾರ ರಾತ್ರಿ ಮಹಿಳೆಯೊಂದಿಗೆ ನಗರದ ಲಾಡ್ಜ್ವೊಂದರಲ್ಲಿ ಬಂದು ಉಳಿದುಕೊಂಡಿದ್ದ. ಬೆಳಗಿನ ಸಮಯದಲ್ಲಿ ಅದೇ ಮಹಿಳೆಯ ಸೀರೆಯಿಂದ ಬಾತ್ರೂಮ್ನಲ್ಲಿ ನೇಣು ಬಿಗಿದುಕೊಂಡಿದ್ದಾನೆ ಎನ್ನಲಾಗಿದೆ. ಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆತನ ಜತೆಗೆ ಬಂದಿದ್ದ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಪ್ರಕರಣದ ಕುರಿತು ಮೃತನ ಸಂಬಂಧಿಕರು ಕೊಲೆ ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.