ಮಹಿಳೆ ಮೇಲೆ ಆ್ಯಸಿಡ್​ ಎರಚಿದ ಅಪರಾಧಿಗೆ ಜೈಲು

High court logo
Published on

ಹಾವೇರಿ: ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಆ್ಯಸಿಡ್​ ಎರಚಿ ಕೊಲೆ ಮಾಡಲು ಪ್ರಯತ್ನಿಸಿದ ಅಪರಾಧಿಗೆ 10 ವರ್ಷ ಜೈಲು ಶಿೆ ಹಾಗೂ 1.70 ಲಕ್ಷ ರೂ. ದಂಡ ವಿಧಿಸಿ ಇಲ್ಲಿಯ ಜಿಲ್ಲಾ ಸತ್ರ ನ್ಯಾಯಾಧೀಶ ನಿಂಗೌಡ ಪಾಟೀಲ ಮಂಗಳವಾರ ತೀರ್ಪು ನೀಡಿ ಆದೇಶಿಸಿದ್ದಾರೆ.

ನಗರದ ನಿವಾಸಿ ಪ್ರಸಾದ ಉರ್ ಪ್ರಶಾಂತ ಶಿವಾನಂದಪ್ಪ ಚಿಕ್ಕಳ್ಳಿ ಶಿೆಗೊಳಗಾದ ಅಪರಾಧಿ.

ಈತ 2020 ಜನೇವರಿ 28ರಂದು ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಆ್ಯಸಿಡ್​ ಎರಚಿ ಕೊಲೆ ಮಾಡಲು ಯತ್ನಿಸಿದ್ದ. ಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮಹಿಳೆ ಹಾವೇರಿ ಮಹಿಳಾ ಪೊಲೀಸ್​ ಠಾಣೆಗೆ ದೂರು ನೀಡಿದ್ದಳು. ಪ್ರಕರಣದ ಕುರಿತು ಠಾಣೆಯ ಸಿಪಿಐ ಟಿ. ಮಂಜಣ್ಣ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸಾಾಧಾರ ಸಮೇತ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅಪರಾಧಿಗೆ ಶಿೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿಜಯಕುಮಾರ ಪಾಟೀಲ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net