ಮುಟ್ಟಿನ ಸಮಸ್ಯೆಯಿಂದ ನೊಂದು ವಿಷ ಸೇವಿಸಿ ಆತ್ಮಹತ್ಯೆ

Crime Logo
Published on

ಬ್ಯಾಡಗಿ: ಮುಟ್ಟಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಳೆ ಶಿಡೇನೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಉಮಾ ವೀರನಗೌಡ ಪಾಟೀಲ (30) ಮೃತ ಮಹಿಳೆ.
ಇವರು ಮೂರ‌್ನಾಲ್ಕು ವರ್ಷದಿಂದ ಮುಟ್ಟಿನ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net