ಗಾಂಜಾ ಮಾರುತ್ತಿದ್ದ ಮಹಿಳೆ ಬಂಧನ

Published on

ಮಳವಳ್ಳಿ : ಪಟ್ಟಣದ ಮನೆಯೊಂದರ ಮೇಲೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಮಹಿಳೆಯೊಬ್ಬಳನ್ನು ಬಂಧಿಸಿ, 1870 ಗ್ರಾಂ ಗಾಂಜಾ ಸೊಪ್ಪು ವಶಪಡಿಸಿಕೊಂಡಿದ್ದಾರೆ.

ಲಕ್ಷ್ಮೀ
ಲಕ್ಷ್ಮೀ


ಕೋಟೆ ಮಡಿವಾಳ ಬೀದಿಯ ಲಕ್ಷ್ಮೀ ಬಂಧಿತರು. ಇವರು ತಮ್ಮ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಸೊಪ್ಪು ಸಂಗ್ರಹಿಸಿಟ್ಟುಕೊಂಡಿದ್ದು, ಗಾಂಜಾ ವ್ಯಸನಿಗಳಿಗೆ 200 ರಿಂದ 500 ರೂ. ವರೆಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯರಿಂದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಲಕ್ಷ್ಮೀ ಅವರ ಮನೆಗೆ ಡಿವೈಎಸ್ಪಿ ಕೃಷ್ಣಪ್ಪ ನೇತೃತ್ವದಲ್ಲಿ ಪಿಎಸ್‌ಐ ಜಯಲಕ್ಮಮ್ಮ ಎಎಸ್‌ಐ ಸುರೇಶ್ ಸೇರಿದಂತೆ ಸಿಬ್ಬಂದಿ ಜತೆಗೂಡಿ ದಾಳಿ ನಡೆಸಿ ಪರಿಶೀಲನೆ ನಡೆಸುವ ಮೂಲಕ ಮಾಲು ಸಮೇತ ಆರೋಪಿಯನ್ನು ವಶಕ್ಕೆ ಪಡೆಯಲಾಗಿತ್ತು.
ಸೋಮವಾರ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net