

ಹಿರೇಕೆರೂರ: ಮೊಬೈಲ್‌ಫೋನ್‌ಗೆ ಕರೆನ್ಸಿ ಹಾಕಿಸುವ ವಿಷಯವಾಗಿ ಜಗಳವಾಡಿಕೊಂಡು ಯುವತಿ ನೇಣಿಗೆ ಶರಣಾದ ಘಟನೆ ಪಟ್ಟಣದ ವಿವೇಕಾನಂದ ನಗರದಲ್ಲಿ ಶುಕ್ರವಾರ ನಡೆದಿದೆ.
ಮೂಲತಃ ರಟ್ಟಿಹಳ್ಳಿ ತಾಲೂಕಿನ ಹುಲ್ಲತ್ತಿ ಗ್ರಾಮದವರಾಗಿದ್ದು, ಪಟ್ಟಣದ ವಿವೇಕಾನಂದ ನಗರದ ನಿವಾಸಿ ಪಲ್ಲವಿ ಹೂವಪ್ಪ ಕರೆಣ್ಣನವರ(25) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಬಿಇಡಿ ಓದುತ್ತಿದ್ದು, ಕರೆನ್ಸಿ ಹಾಕಿಸಿಕೊಳ್ಳುವ ವಿಚಾರವಾಗಿ ಜಗಳವಾಡಿ ಮನೆಯ ಬೆಡ್‌ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.