ಬಸ್​ಗಾಗಿ ಕಾಯುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ದೋಚಿದ ಖದೀಮರು; ಓರ್ವ Arrest​, ಆರೋಪಿಗಳಿಗೆ ಮುಂದುವರೆದ ಶೋಧ

Harassment
Published on

ಬೆಂಗಳೂರು: ಕೆ.ಆರ್‌.ಮಾರ್ಕೆಟ್‌ನಲ್ಲಿ ಬಸ್‌ಗಾಗಿ ಕಾಯುವಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್‌ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸೆಗಿ ಮೊಬೈಲ್‌, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕೇಂದ್ರ ವಿಭಾಗದ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಭಾನುವಾರ (ಜನವರಿ 19) ರಾತ್ರಿ ಸುಮಾರು 11.30ಕ್ಕೆ ಕೆ.ಆರ್‌.ಮಾರ್ಕೆಟ್‌ ಬಳಿಯ ಗೋಡೌನ್‌ ಸ್ಟ್ರೀಟ್‌ನಲ್ಲಿ ಈ ಘಟನೆ ನಡೆದಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ ವ್ಯಕ್ತಿಯೊಬ್ಬನನ್ನು ವಶಕ್ಕೆ (Arrest) ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

harassment

ಯಲಹಂಕಕ್ಕೆ ತೆರಳಲು ಮಹಿಳೆ ಭಾನುವಾರ ರಾತ್ರಿ ಕೆ.ಆರ್.ಮಾರ್ಕೆಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದರು. ಈ ವೇಳೆ ಇಬ್ಬರು ಅಪರಿಚಿತರು ಅಲ್ಲಿಗೆ ಬಂದಿದ್ದಾರೆ. ಆಗ ಮಹಿಳೆ ಬಸ್‌ ಬಗ್ಗೆ ವಿಚಾರಿಸಿದ್ದಾರೆ. ಬಸ್‌ ತೋರಿಸುವುದಾಗಿ ಮಹಿಳೆಯನ್ನು ಗೋಡೌನ್‌ ಸ್ಟ್ರೀಟ್‌ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಕೃತ್ಯ ಎಸಗಿದ ಬಳಿಕ ಆರೋಪಿಗಳು ಮಹಿಳೆಯನ್ನು ಬೆದರಿಸಿ ಮೊಬೈಲ್, ಹಣ, ಚಿನ್ನಾಭರಣ ದೋಚಿಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net