ಮಹಿಳೆಯರು, ಹಿರಿಯರಿಂದ ಬನ್ನಿಗಿಡಕ್ಕೆ ಪೂಜೆ

ನಾಕಲಗೂಡು ಗ್ರಾಮದಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ನಾಕಲಗೂಡು ಗ್ರಾಮದಲ್ಲಿ ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
Published on

ಆಲೂರು: ಪಟ್ಟಣ ಸೇರಿದಂತೆ ತಾಲೂಕಿನ ನಾಲ್ಕೂ ಹೋಬಳಿ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ತಾಲೂಕಿನ ಪಾಳ್ಯ ಹೋಬಳಿಯ ನಾಕಲಗೂಡು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ದೇವಿರಮ್ಮ ದೇವಸ್ಥಾನದಲ್ಲಿ 9 ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಗುರುವಾರ ವಿಜಯದಶಮಿ ಪ್ರಯುಕ್ತ ಗ್ರಾಮದ ಮಹಿಳೆಯರು ಹಾಗೂ ಹಿರಿಯರು ವಾದ್ಯಮೇಳದೊಂದಿಗೆ ಸಾಮೂಹಿಕವಾಗಿ ಮಂಟಪ ಬಳಿ ತೆರಳಿ ಬನ್ನಿಗಿಡಕ್ಕೆ ಪೂಜೆ ಸಲ್ಲಿಸಿದರು.

ನಂತರ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ್ ನಾಕಲಗೂಡು ಗುಂಡು ಹಾರಿಸುವ ಮೂಲಕ ಬನ್ನಿ ಕತ್ತರಿಸಿದರು. ಈ ಸಂದರ್ಭದಲ್ಲಿ ಎಲ್ಲರೂ ಬನ್ನಿ ವಿನಿಮಯ ಮಾಡಿಕೊಂಡು ಪರಸ್ಪರ ಶುಭ ಹಾರೈಸಿದರು.

ತಾಲೂಕಿನ ಹಳೇ ಆಲೂರು ಗ್ರಾಮದ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನ, ಮರೆತು ಗ್ರಾಮದ ತಿರುಮಲ ವೆಂಕಟರಮಣ ಸ್ವಾಮಿ ಹಾಗೂ ಜನ್ನಾಪುರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಸೇರಿದಂತೆ ವಿವಿಧೆಡೆ ಜನರು ಶ್ರದ್ಧೆ ಭಕ್ತಿಯಿಂದ ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಆಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net