ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ ವನಿತೆಯರು

08 HANUR 3
ಹುತ್ತೂರು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಿಕ್ಷಕಿಯರಾದ ಚೈತ್ರಾ, ಶಾಂತಿಪ್ರಿಯಾ ಹಾಗೂ ಅಡುಗೆ ಸಿಬ್ಬಂದಿ ರಾಜಮ್ಮ, ಹೂವಮ್ಮ ಅವರನ್ನು ಸನ್ಮಾನಿಸಲಾಯಿತು. ಮಾದೇಶ್, ಚಂದ್ರಶೇಖರ್, ಕುಮಾರ್, ನಟರಾಜು, ಮಹೇಂದ್ರ ಇದ್ದರು.
Published on

ಹನೂರು: ತಾಲೂಕಿನ ಹುತ್ತೂರು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಿಕ್ಷಕಿಯರು ಹಾಗೂ ಅಡುಗೆ ಸಿಬ್ಬಂದಿಯನ್ನು ಸನ್ಮಾನಿಸುವುದರ ಮೂಲಕ ವಿಶ್ವ ಮಹಿಳಾ ದಿನವನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕ ಸಿ. ಮಾದೇಶ್ ಮಾತನಾಡಿ, ಸಮಾಜದಲ್ಲಿ ಈ ಹಿಂದೆ ಮಹಿಳೆಯರನ್ನು ಅಸಮಾನತೆಯಿಂದ ಕಾಣಲಾಗುತ್ತಿತ್ತು. ಅಡುಗೆ ಕೋಣೆಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಇದರಿಂದ ಅವಕಾಶದಿಂದ ವಂಚಿತರಾಗಿದ್ದರು. ಆದರೀಗ ಆಧುನಿಕತೆ ಬೆಳೆದಂತೆ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವುದರ ಮೂಲಕ ಕೆಲಸ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಆರ್ಥಿಕವಾಗಿ ಸಬಲರಾಗಿದ್ದಾರೆ. ಅವರದ್ದೇ ಆದ ಸ್ಥಾನಮಾನವನ್ನು ಹೊಂದಿದ್ದಾರೆ. ಕುಟುಂಬದ ನಿರ್ವಹಣೆಯಲ್ಲಿ ಅವರ ಪಾತ್ರ ಹಿರಿದಾಗಿದ್ದು, ದೇಶದ ಅಭಿವೃದ್ಧಿಯಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.

ಬಳಿಕ ಶಿಕ್ಷಕಿಯರಾದ ಚೈತ್ರಾ, ಶಾಂತಿಪ್ರಿಯಾ ಹಾಗೂ ಅಡುಗೆ ಸಿಬ್ಬಂದಿ ರಾಜಮ್ಮ, ಹೂವಮ್ಮ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕರಾದ ಚಂದ್ರಶೇಖರ್, ಕುಮಾರ್, ನಟರಾಜು, ಮಹೇಂದ್ರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net