ಸ್ವದ್ಯೋಗದಿಂದ ಮಹಿಳೆಯರು ಪ್ರಬಲ

Kdb_Swaudyoga
Published on

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗೋಳಿತ್ತೊಟ್ಟು ವಲಯದ ರಾಮಕುಂಜದಲ್ಲಿ ಶ್ರೀ ಶಾರದಾ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ರಾಮಕುಂಜ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು.

ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಸತೀಶ್ ಭಟ್ ಉದ್ಘಾಟಿಸಿ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳದ ಆಶಯದಂತೆ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರು ಸಂಘಟಿತರಾಗಿ ಸ್ವ ಉದ್ಯೋಗವನ್ನು ಮಾಡಿಕೊಂಡು ಆರ್ಥಿಕ, ಸಾಮಾಜಿಕವಾಗಿ ಪ್ರಬಲರಾಗಬೇಕು ಎಂದರು.

ತಾ.ಪಂ. ಮಾಜಿ ಸದಸ್ಯೆ ತೇಜಸ್ವಿನಿ ಕಟ್ಟಪುಣಿ, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಶುಭ ಹಾರೈಸಿದರು. ಜ್ಞಾನವಿಕಾಸದ ಸಂಯೋಜಕಿ ಪ್ರಮೀಳಾ ಉಪಸ್ಥಿತರಿದ್ದರು. ಪ್ರಗತಿ ಬಂಧು ಸ್ವಸಹಾಯ ಸಂಘದ ಮೂಲಕ ಸಾಲ ಸೌಲಭ್ಯವನ್ನು ಪಡೆದು ಉತ್ತಮ ಆರ್ಥಿಕ ವ್ಯವಹಾರವನ್ನು ನಡೆಸುತ್ತಿರುವ ಸಂಘಗಳಿಗೆ ಲಾಭಾಂಶವನ್ನು ವಿತರಣೆ ಮಾಡಲಾಯಿತು.

ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಪ್ರಾಸ್ತಾವಿಸಿದರು. ಸೇವಾ ಪ್ರತಿನಿಧಿ ಸುಮಲತಾ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಜಯಶ್ರೀ ವಂದಿಸಿದರು. ವಲಯ ಮೇಲ್ವಿಚಾರಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಸೇವಾಪ್ರತಿನಿಧಿ ಪ್ರೇಮಾವತಿ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net