ಹೆಜ್ಜೇನು ಹಿಂಡು ದಾಳಿ, ಆರು ಮಹಿಳೆಯರಿಗೆ ಗಂಭೀರ ಗಾಯ

jenu
Published on

ಕೋಟ: ಕೋಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಸನಗುಂದು ಪರಿಸರದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿಕೊಂಡಿದ್ದ ಆರು ಮಹಿಳೆಯರು ಶುಕ್ರವಾರ ಸಾಯಂಕಾಲ ಹೆಜ್ಜೇನು ಹಿಂಡು ಕಡಿತದಿಂದ ಗಂಭೀರ ಗಾಯಗೊಂಡಿದ್ದಾರೆ.

ಗದ್ದೆಯಲ್ಲಿ ಕೃಷಿ ಕಾರ್ಯ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೆಜ್ಜೇನು ದಾಳಿ ಮಾಡಿದ್ದು, ಐವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅವರಲ್ಲಿ ಪ್ರೇಮಾ ಹಾಗೂ ಬುಡ್ಡು ಎನ್ನುವವರು ತೀವ್ರ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕಾವೇರಿ, ಪದ್ದು, ಸುಶೀಲಾ ಎಂಬುವರು ಕೋಟೇಶ್ಚರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಚ್ಚಿ ಕೋಟದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪರಿಸರದ ಚಂದ್ರ ಪೂಜಾರಿ ಕದ್ರಿಕಟ್ಟು ಹಾಗೂ ಗೋವಿಂದ ಮರಕಾಲ, ಅಶೋಕ ಗ್ರಾಮಸ್ಥರ ನೆರವಿನೊಂದಿಗೆ ಆಸ್ಪತ್ರೆ ಸಾಗಿಸುವಲ್ಲಿ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net