ಕಲಬುರಗಿಯಲ್ಲಿ ಮಹಿಳೆಯ ಬರ್ಬರ ಕೊಲೆ

Crime_20250605010013932.jpg
Published on

ಕಲಬುರಗಿ: ನಗರದಲ್ಲಿ ಬೆಳ್ಳಂ ಬೆಳಗ್ಗೆ ಮಹಿಳೆಯ ಬರ್ಬರ ಕೊಲೆ ಮಾಡಲಾಗಿದೆ.

ಕಲಬುರಗಿ ನಗರದ ಶಹಬಜಾರ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ರೂಪಾ(32) ಕೊಲೆಯಾದ ಮಹಿಳೆ.

ಮೃತ ಮಹಿಳೆ ಕಲಬುರಗಿಯ ಕಲ್ಲಹಂಗರಗಾ ಗ್ರಾಮದ ನಿವಾಸಿಯಾಗಿದ್ದು, ಕಲಬುರಗಿ ನಗರದ ಶಹಬಜಾರ್ ಬಡಾವಣೆಯಲ್ಲಿ ವಾಸವಿದ್ದಳು.

ಸಮೋಸ ಮಾಡಲು ಹೋಟೆಲ್ ಗೆ ತೆರಳುವಾಗ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಅನೈತಿಕ ಸಂಬಂಧದ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಕಮೀಷನರ್ ಡಾ.ಶರಣಪ್ಪ ಎಸ್.ಡಿ, ಎಸಿಪಿ ಚಂದ್ರಶೇಖರ್ ಸೇರಿ ಹಿರಿಯ ಅಧಿಕಾರಿಗಳ ಪರಿಶೀಲನೆ ನಡೆಸಿದರು. ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net