ಬೆಳ್ಳಿ ತೇರು ಎಳೆದು ಸಂಭ್ರಮಿಸಿದ ಮಹಿಳೆಯರು

Women celebrated by pulling a silver chariot
Published on

ನರೇಗಲ್ಲ: ಸಮೀಪದ ಹಾಲಕೆರೆ ಗ್ರಾಮದ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಲಿಂ. ಗುರು ಅನ್ನದಾನ ಸ್ವಾಮೀಜಿ 48ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಬೆಳ್ಳಿ ರಥೋತ್ಸವ ಸೋಮವಾರ ಸಂಜೆ ವೈಭವಯುತವಾಗಿ ನೆರವೇರಿತು.

ಹಾಲಕೆರೆ ಕ್ಷೇತ್ರಕ್ಕೆ ಆಗಮಿಸಿದ್ದ ಎಲ್ಲ ಹರ ಗುರು ಚರ ಮೂರ್ತಿಗಳು ಹಾಗೂ ಪೀಠಾಧಿಪತಿ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಬೆಳ್ಳಿ ರಥೋತ್ಸವಕ್ಕೆ ಪೂಜೆ ಸಲ್ಲಿಸಿ, ಚಾಲನೆ ನೀಡಿದರು. ನಂತರ ಮಹಿಳೆಯರು, ವಿದ್ಯಾರ್ಥಿನಿಯರು ಬೆಳ್ಳಿ ತೇರನ್ನು ಎಳೆದು ಸಂಭ್ರಮಿಸಿದರು.

ಭಕ್ತರು ಅನ್ನದಾನೇಶ್ವರ ಮಹಾರಾಜ್ ಕೀ ಜೈ, ಗುರು ಕುಮಾರೇಶ್ವರ ಮಹಾರಾಜ್ ಕೀ ಜೈ, ಲಿಂ. ಗುರು ಅನ್ನದಾನ ಸ್ವಾಮೀಜಿ ಕೀ ಜೈ, ಲಿಂ. ಅಭಿನವ ಅನ್ನದಾನ ಸ್ವಾಮೀಜಿ ಕೀ ಜೈ, ಮುಪ್ಪಿನ ಬಸವಲಿಂಗ ಸ್ವಾಮೀಜಿ ಕೀ ಜೈ ಎಂದು ಜಯ ಘೋಷಣೆಗಳೊಂದಿಗೆ ತೇರು ಎಳೆದರು.

ಥವು ಯಶಸ್ವಿಯಾಗಿ ಮರಳಿ ಸ್ವಸ್ಥಳಕ್ಕೆ ಬಂದು ನಿಂತಾಗ ಚಪ್ಪಾಳೆ ತಟ್ಟಿದ ಭಕ್ತರು ಭಕ್ತಿಭಾವ ಮೆರೆದರು. ಮಹಿಳೆಯರು ಭಕ್ತಿ, ಶ್ರದ್ಧೆಯಿಂದ ತೇರಿಗೆ ಪುಷ್ಪ ಎರಚುವ ಮೂಲಕ ಸಂಭ್ರಮದಿಂದ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ಗದಗ, ಧಾರವಾಡ, ಕೊಪ್ಪಳ, ಬಾಗಲಕೋಟೆ, ವಿಜಯನಗರ, ಬಳ್ಳಾರಿ, ರಾಯಚೂರು, ದಾವಣಗೆರೆ ಹಾಗೂ ಸುತ್ತ್ತಲಿನ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಅದರಲ್ಲೂ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಸೇರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net