ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು Library ಕಟ್ಟಿಸಿದ ಮಹಿಳೆ

Gruhalakshmi Library
Published on

ಬೆಳಗಾವಿ: 2023ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ (Congress Party) ಐದು ಗ್ಯಾರಂಟಿಗಳನ್ನು (Five Guarantees) ಘೋಷಿಸಿತ್ತು. ಅದರಂತೆ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮಿ (Gruhalakshmi) ಯೋಜನೆ ಸಹ ಒಂದಾಗಿದ್ದು, ಇದರಿಂದ ಬರುವ ಹಣದಿಂದ ಬಹಳಷ್ಟು ಮಹಿಳೆಯರು ಅನುಕೂಲ ಪಡೆದುಕೊಂಡಿದ್ದಾರೆ.

ಅದರಂತೆ ಈ ಹಿಂದೆ ಮಹಿಳೆಯರು ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮೊಬೈಲ್​, ಕಣ್ಣಿನ ಶಸ್ತ್ರಚಿಕಿತ್ಸೆ, ಫ್ರಿಡ್ಜ್​, ಹೋಳಿಗೆ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಕೊಡುವ ಮೂಲಕ ಸುದ್ದಿಯಾಗಿದ್ದರು. ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಗ್ರಂಥಾಲಯ (Library) ತೆರೆಯುವ ಮೂಲಕ ಸುದ್ದಿಯಾಗಿದ್ದಾರೆ.

ಬೆಳಗಾವಿ (Belgavi) ಜಿಲ್ಲೆ ರಾಯಭಾಗ ತಾಲ್ಲೂಕಿನ ಮಂಟೂರ ಗ್ರಾಮದ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ಗೃಹಲಕ್ಷ್ಮಿ (GruhaLakshmi) ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು, ಗ್ರಾಮದಲ್ಲಿ ಗ್ರಂಥಾಲಯವನ್ನು (Library) ತೆರೆದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (Competitive Exams) ಅನುಕೂಲವಾಗುವ ನಿಟ್ಟಿನಲ್ಲಿ ಗ್ರಂಥಾಲಯ ತೆರೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರಾಗಿರುವ ಮಲ್ಲವ್ವ ಭೀಮಪ್ಪ ಮೇಟಿ 13 ಕಂತಿನ ಗೃಹಲಕ್ಷ್ಮಿ (Gruhalakshmi) ಹಣ ಹಾಗೂ ಪಂಚಾಯ್ತಿ ಸದಸ್ಯತ್ವದ ಗೌರವಧನವನ್ನು ಕೂಡಿಸಿ 1,50,000 ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗಲೆಂದು ಗ್ರಂಥಾಲಯ (Library) ನಿರ್ಮಿಸಿದ್ದಾರೆ. ಮಲ್ಲವ್ವ ಅವರ ಮಾದರಿ ನಡೆ ಹಲವರ ಮೆಚ್ಚುಗೆಗೆ ಪಾತ್ರವಾಗಿದ್ದು, ಮತ್ತಷ್ಟು ಜನಕ್ಕೆ ಮಾದರಿಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net