ಮರದ ಕೆಳಗೆ ಕುಳಿತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು

Lightning
Published on

ತುಮಕೂರು: ಮಳೆ ಬೀಳುತ್ತಿದ್ದಾಗ ರಕ್ಷಣೆಗಾಗಿ ಮರದ ಕೆಳಗೆ ಕುಳಿತಿದ್ದ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೂದನಹಳ್ಳಿಯಲ್ಲಿ ನಡೆದಿದೆ.

ಲಕ್ಷ್ಮಮ್ಮ (43) ಮೃತ ದುರ್ದೈವಿ. ತುಮಕೂರಿನಲ್ಲಿ ಗುರುವಾರ ಸುರಿದ ಮಳೆಯಿಂದ ರಕ್ಷಿಸಿಕೊಳ್ಳಲು ಮರದ ಆಶ್ರಯ ಪಡೆದಿದ್ದೇ ಮುಳುವಾಗಿದೆ. ಕೂಡಲೇ ಸಿಡಿಲು ಬಡಿದು ಸಾವನ್ನಪ್ಪಿದ್ದಾಳೆ.

ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಕುರಿತು ಹುಲಿಯೂರುದುರ್ಗ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

women dead due to lightning

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net