ಜಮೀನಿನಲ್ಲಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ವೇಳೆಯೇ ಸಿಡಿಲು ಬಡಿದು ಮಹಿಳೆ ಸಾವು! 7 ಮಂದಿಗೆ ಗಾಯ

Lightning
Published on

ಹಾವೇರಿ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಕೃಷಿ ಕಾರ್ಯದಲ್ಲಿ ತೊಡಗಿದ್ದ ವೇಳೆಯೇ ಸಿಡಿಲು ಬಡಿದು ಓರ್ವ ಮಹಿಳೆ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಜಮೀನಿನಲ್ಲಿ ಕೆಲವರು ಕೃಷಿ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಕವಿತಾ ಮೂಲಿಮನಿ (20) ಮೃತ ಮಹಿಳೆ. ಇನ್ನುಳಿದ ರತ್ನಾ(35), ಮಾರುತಿ(45), ಶಶಿಕಲಾ(35), ರವೀಂದ್ರಪ್ಪ(65), ಸುಧಾ(60), ಸಾಕಮ್ಮ(45) ಮತ್ತು ಜುಬೇದಾಬಾನು(32) ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಮಾರುತಿ ಸುಣಗಾರ ಎಂಬುವರ‌ ಜಮೀನಿನಲ್ಲಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net