

ನ್ಯಾಮತಿ: ತಾಯಿಯಾಗಿ, ಅಕ್ಕನಾಗಿ, ತಂಗಿಯಾಗಿ, ಪತ್ನಿಯಾಗಿ, ಮಗಳಾಗಿ ಎಲ್ಲ ಸ್ಥಾನಗಳನ್ನು ಸಮರ್ಥವಾಗಿ ನಿಭಾಯಿಸುವ ಮಹಿಳೆ ದೇಶದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿದ್ದಾಳೆ ಎಂದು ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯದ ಬ್ರಹ್ಮಕುಮಾರಿ ವಂದನಾ ಹೇಳಿದರು.
ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಈ ವೇಳೆ ಅಂಬಿಕಾ, ಪ್ರಭಾ ರೇಖಾ, ಸುಮಲತಾ, ದಾಕ್ಷಾಯಿಣಿ ಬಿ. ಪಾವಟೆ, ಅಂಗನವಾಡಿ ಮೇಲ್ವಿಚಾರಕಿ ಪುಷ್ಪಾ, ಕಾರ್ಯಕರ್ತೆ ಹಾಲಮ್ಮ ಕೋಡಿ ಕೊಪ್ಪ, ಸಹಾಯಕಿ ವನಿತಾ ಅವರನ್ನು ಸನ್ಮಾನಿಸಲಾಯಿತು.
ಅಂಬಿಕಾ, ಪ್ರಭಾ, ರೇಖಾ, ಸುಮಲತಾ, ಪುಷ್ಪಾ ಇತರರು ಇದ್ದರು.