ರಸ್ತೆ ಅಪಘಾತಕ್ಕೆ ತಾಯಿ ಬಲಿ, ಪುತ್ರ ಗಂಭೀರ

raste apagata
Published on

ಹಳೆಯಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಹಳೆಯಂಗಡಿ ನಿವಾಸಿ ಸುಖಲತಾ (40) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಕೆ ಪುತ್ರ ಚಿರಾಗ್ (12) ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಉಡುಪಿಯಿಂದ ವೇಗವಾಗಿ ಬರುತ್ತಿದ್ದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ರಸ್ತೆ ವಿಭಜಕದಲ್ಲಿ ಮಗುಚಿ ಬಿದ್ದಿದೆ. ಸ್ಥಳೀಯರ ಸಹಕಾರದಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮೃತ ಮಹಿಳೆ ಪತಿ ಕಾಪುವಿನಲ್ಲಿ ಇಲೆಕ್ಟ್ರಿಶನ್ ಆಗಿದ್ದು ಘಟನೆ ನಂತರ ಆಸ್ಪತ್ರೆಗೆ ಆಗಮಿಸಿದ್ದಾರೆ. ಚಿರಾಗ್‌ಗೆ ಹಲವು ಶಸ್ತ್ರ ಚಿಕಿತ್ಸೆ ನಡೆಯುತ್ತಿದ್ದು ರಕ್ತವನ್ನು ಹಲವರು ದಾನಿಗಳು ಒದಗಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net