

ಗೌರಿಬಿದನೂರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಹೇಳಿದರು.
ನಗರದ ಎಚ್.ಎನ್.ಕಲಾಭವನದಲ್ಲಿ ಯೋಜನೆ ಹಾಗೂ ಪ್ರಗತಿಪರ ಸ್ವ ಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯಲ್ಲಿ ಮಾತನಾಡಿದರು.
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಗ್ರಾಮೀಣಾಭಿವೃದ್ಧಿ ತೆಗೆ ಜನರಿಗೆ ಸ್ವಾವಲಂಬಿ ಜೀವನ ಸಾಗಿಸಲು ನೆರವಾಗಿದೆ. ಇದರಿಂದ ಮಹಿಳೆಯರ ಆರ್ಥಿಕ ಪ್ರಗತಿ ತೆಗೆ ಸಾಮಾಜಿಕ ಬದಲಾವಣೆಯನ್ನು ಕಾಣುತ್ತಿದ್ದೇವೆ. ಸಾಮೂಹಿಕವಾಗಿ ವರಮಹಾಲಕ್ಷ್ಮೀ ಪೂಜೆ ಆಯೋಜಿಸುವ ಮೂಲಕ ನಮ್ಮ ಧರ್ಮ ಸಂಸ್ಕೃತಿ, ಆಚರಣೆಗಳನ್ನು ಉಳಿಸುವ ಕೆಲಸ ಮಾಡುತ್ತಿದೆ ಎಂದರು.
ನಗರಸಭೆ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಉಪಾಧ್ಯಕ್ಷ ಫರೀದ್, ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಮೋಹನ್, ತಹಸೀಲ್ದಾರ್ ಮಹೇಶ್.ಎಸ್ ಪತ್ರಿ, ಪೌರಾಯುಕ್ತೆ ಡಿ.ಎಂ. ಗೀತಾ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸಮೂರ್ತಿ, ಜಿಲ್ಲಾ ನಿರ್ದೇಶಕ ಪ್ರಶಾಂತ್, ನಾಗರಾಜು ನಾಯ್ಕ, ನಿವೃತ್ತ ಪ್ರಾಂಶುಪಾಲ ನಾಗರತ್ನ, ಚಂದ್ರಶೇಖರ, ಲಕ್ಷ್ಮೀ, ವೇಣು ಮಾದವ, ಗೋವಿಂದಪ್ಪ, ಮಂಜುಳಾ. ಕೆ ಎಚ್ ಪಿ ಕಾರ್ಯದರ್ಶಿ ಶ್ರೀನಿವಾಸಗೌಡ. ಹಾಜರಿದ್ದರು.