ಮಹಿಳೆಯರು ಮಿಶನ್ ಶಕ್ತಿ ಯೋಜನೆಯನ್ನು ಸದುಪಯೋಗ ಪಡೆಸಿಕೊಳ್ಳಿ: ಭಾರತಿ ಶೇಟ್ಟರ್

06GDG01
Published on

ಮಿಶನ್ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸುರಕ್ಷತೆ ಭದ್ರತೆ ಸಬಲೀಕರಣ ಕುರಿತು 100 ದಿನಗಳ ಅರಿವು ಕಾರ್ಯಕ್ರಮ

ಗದಗ: ಮಿಷನ್ ಶಕ್ತಿ ಯೋಜನೆಯು ಮಹಿಳೆರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ವಿಶೇಷವಾದ ರೂಪರೇಷಗಳನ್ನು ಹೊಂದಿದೆ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡದ ಯೋಜನಾಧಿಕಾರಿ ಶ್ರೀಮತಿ ಭಾರತಿ ಶೇಟ್ಟರ್ ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾಡಳಿತ,ಜಿಲ್ಲಾಪಂಚಾಯತ ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಮಿಷನ್ ಶಕ್ತಿ ಯೋಜನೆಯ ರೂಪರೇಷಗಳ ಕುರಿತು ಜಿಲ್ಲೆಯ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳಿಗೆ, ಸಹಾಯಕ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳಿಗೆ, ಮೇಲ್ವಿಚಾರಕಿಯರಿಗೆ ಹಿರಿಯ ಮೇಲ್ವೀಚಾರಕಿಯರಿಗೆ ಏರ್ಪಡಿಸಿದ ಕಾರ್ಯಕ್ರಮವನ್ನು  ಉದ್ಘಾಟಸಿ ಮಾತನಾಡಿ ಮಿಷನ್ ಶಕ್ತಿ ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ ಮಿಷನ್ ಶಕ್ತಿ ಯೋಜನೆಯಡಿ ಲಭ್ಯವಿರುವ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ, ರಾಧಾ ಜಿ ಮಣ್ಣೂರು,  ಮಾತನಾಡಿ ಮಿಷನ್ ಶಕ್ತಿ ಯೋಜನೆಯ ಕಾರ್ಯವೈಖರಿ ದೇಶಕ್ಕೆ ಮಾದರಿಯಾಗಬೇಕು ಹಾಗೂ ಮಹಿಳೆಯರಿಗೆ ರಾಜ್ಯಸರರ್ಕಾರ ಕೇಂದ್ರ ಸರ್ಕಾರಗಳು ನೀಡಿದ ಎಲ್ಲ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡು ಅವರು ದೇಶದ ಆರ್ಥಿಕ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಸಮಾಜದ ಎಲ್ಲ ಸ್ಥರದ ಮಹಿಳೆಯರನ್ನು ಜಾಗೃತಗೊಳಿಸುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಎಲ್ಲ ಅಧಿಕಾರಿಗಳ ಗುರುತರ ಜವಾಬ್ದಾರಿ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಕಮಲಾ ಬೈಲೂರ  ಮಾತನಾಡಿ ಇಂದು ಮಹಿಳೆಯರು ಸ್ವತಂತ್ರವಾಗಿ ಪ್ರತಿಯೊಂದು ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಲು ತಯಾರಿದ್ದಾರೆ. ಸಮಾಜದ ಪ್ರತಿಯೊಂದು ಸ್ಥರದ ಮಹಿಳೆಯರಿಗೆ ಸಮಯಕ್ಕೆ ಸರಿಯಾಗಿ  ಸರಿಯಾದ ಮಾಹಿತಿ ಸಹಕಾರ ಹಾಗೂ ಮಾರ್ಗದರ್ಶನದ ಸಮಾಲೋಚನೆ. ಅಗತ್ಯ ನೆರವು ನೀಡುವುದು ಈ ಯೋಜನೆಯ ಗುರಿಯಾಗಿದೆ ಎಂದು ಹೆಳಿದರು.

, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಉಪನಿರ್ದೇಶಕ  .ಪಿ.ವಾ0iÀiï.ಶೇಟೆಪ್ಪನವರ  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿ ಮಹಿಳೆ ಮತ್ತು ಮಕ್ಕಳ ಅಪೌಷ್ಠಿಕತೆಯನ್ನು ಹೊಗಲಾಡಿಸಲು ಪೆÇೀಷಣ ಅಭಿಯಾನ, ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಯೋಜನೆ, ಹಲವಾರು ಸೇವೆಗಳು ಒಂದೇ ಕಡೆ ಸಿಗುಂತಾಗಲು ಸಖಿ ಒನ್ ಸ್ಟಾಪ್ ಸೆಂಟರ್, ಗರ್ಭೀಣಿ/ಬಾಣಂತಿಯರಿಗೆ ಆರ್ಥಿಕ ಸಹಾಯವಾಗಲು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ. ಭಾಗ್ಯಲಕ್ಷ್ಮಿ/ಸುಕನ್ಯ ಸಮೃದ್ಧಿ ಯೋಜನೆ  ಮಹಿಳೆ ಮತ್ತು ಮಕ್ಕಳ ಕ್ಷೇತ್ರದಲ್ಲಿ ಗಣನೀಯವಾದ ಸೇವೆಯ ಜೊತೆಗೆ ಮಿಷನ್ ಶಕ್ತಿ ಯೋಜನೆಯು ಸಮಾಜದ ಪ್ರತಿಯೊಬ್ಬ ಹೆಣ್ಣು ಮಗು/ಮಹಿಳೆಯರಿಗೆ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಅಗತ್ಯ ಕ್ರಮಗಳನ್ನು ಹೆಚ್ಚಿನ ಉತ್ಸುಕತೆಯಿಂದ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಮಾಡಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಐಸಿಡಿಎಸ್ ಅಧಿಕ್ಷಕ ರಾಜು ಕಂಠಿಗೊಣ್ಣವರ, ಕಚೇರಿ ವಿಭಾಗ ಅಧಿಕ್ಷಕರು ಶ್ರೀಮತಿ.ಪ್ರಭಾವತಿ ಮುದಿಗೌಡರ್, , ಸ್ತ್ರೀ ಶಕ್ತಿ ವಿಭಾಗ ಅಧಿಕ್ಷಕರಾದ ಶ್ರೀಮತಿ.ಕಸ್ತೂರಿ ಬಳ್ಳೋಳ್ಳಿ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಸಿಬ್ಬಂದಿ ವರ್ಗ ಹಾಜರಿದ್ದರು
ಕಾರ್ಯಕ್ರಮವನ್ನು ಪ್ರಧಾನಮಂತ್ತಿ ಮಾತೃ ವಂದನಾ ಯೋಜನೆ ಜಿಲ್ಲಾ ಸಂಯೋಜಕ ಶ್ರೀಧರ ಪೂಜಾರ ನಿರೂಪಿಸಿದರು ಹಾಗೂ ಶ್ರೀಮತಿ.ಮಧು ಉಪ್ಪಾರ ವಂದಿಸಿದರು.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net