ಶಕ್ತಿ ಯೋಜನೆಯಿಂದ ಮಹಿಳಾ ಸಬಲೀಕರಣ

Oplus_0
ಯಳಂದೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಭಾಗವಹಿಸಿದ್ದರು. ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್ ಇತರರು ಇದ್ದರು.
Published on

ಯಳಂದೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಯ ಶಕ್ತಿ ಯೋಜನೆಯಿಂದ ಮಹಿಳಾ ಶಕ್ತಿ ವರ್ಧನೆಯಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

ಪಟ್ಟಣದ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ಶಕ್ತಿ ಯೋಜನೆಯಡಿ 500 ಕೋಟಿ ಉಚಿತ ಪ್ರಯಾಣ ದಾಖಲೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಪ್ರಯಾಣಿಕರಿಗೆ ಸಿಹಿ ವಿತರಿಸಿ ಮಾತನಾಡಿದರು.

ರಾಜ್ಯ ಸರ್ಕಾರದ ಶಕ್ತಿ ಯೋಜನೆ ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. 2023ರ ಜೂ.11ರಂದು ಇದಕ್ಕೆ ಚಾಲನೆ ನೀಡಲಾಗಿದ್ದು, ಈಗ 2 ವರ್ಷ ಕಳೆದಿದೆ. ವಿದ್ಯಾರ್ಥಿನಿಯರೂ ಸೇರಿದಂತೆ ಈವರೆಗೆ ರಾಜ್ಯಾದ್ಯಂತ ಮಹಿಳೆಯರಿಂದ ಉಚಿತ ಪ್ರಯಾಣಕ್ಕಾಗಿ ಸಾವಿರಾರು ಕೋಟಿ ರೂ. ವ್ಯಯಿಸಿದೆ. ಚಾಮರಾಜನಗರ ಜಿಲ್ಲೆಯ ಎಲ್ಲ ವಿಭಾಗಗಳಿಂದ 10 ಲಕ್ಷಕ್ಕೂ ಹೆಚ್ಚು ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಇದಕ್ಕಾಗಿ 368 ಕೋಟಿ ರೂ.ಗೂ ಹೆಚ್ಚು ಹಣವನ್ನು ವ್ಯಯಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಕ್ತಿ ಯೋಜನೆಯಿಂದ ಎಲ್ಲ ಬಸ್‌ಗಳಲ್ಲೂ ಮಹಿಳೆಯೇ ಹೆಚ್ಚಾಗಿರುತ್ತಾರೆ. ಹಾಗಾಗಿ ಇವರಿಗೆ ಪ್ರತ್ಯೇಕ ಬಸ್‌ಗಳನ್ನು ಬಿಡುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕಿದ್ದು, ಈ ಬಗ್ಗೆ ಗಮನ ಸೆಳೆಯಲಾಗುವುದು ಎಂದರು.

ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್, ಪಪಂ ಸದಸ್ಯರಾದ ವೈ.ಜಿ.ರಂಗನಾಥ್, ತಾಪಂ ಮಾಜಿ ಅಧ್ಯಕ್ಷ ನಿರಂಜನ್, ಮುಖಂಡರಾದ ಕಂದಹಳ್ಳಿ ನಂಜುಂಡಸ್ವಾಮಿ, ಅನಿತಾ ನಿರಂಜನ್, ಮದ್ದೂರು ಶ್ರೀಕಂಠ, ಯುವ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರು ನಂಜುಂಡಶೆಟ್ಟಿ, ಶಿವು, ವಿಶ್ವ, ಶ್ರೀನಿವಾಸ್, ನಾಗಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net