

ವಿಜಯವಾಣಿ ಸುದ್ದಿಜಾಲ ಕುಂದಾಪುರ
ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಿದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ನೈಜ ಅರ್ಥ ನೀಡಿದೆ. ದೇಶಾದ್ಯಂತ ಆಡಳಿತವಿರುವ ಕಾಂಗ್ರೆಸ್ ಸರ್ಕಾರಗಳು ಮಾತ್ರ ಯಶಸ್ವಿಯಾಗಿ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದ್ದು, ಎಂದಿಗೂ ಸ್ಥಗಿತಗೊಳ್ಳುವುದಿಲ್ಲ ಎಂದು ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ದಿನೇಶ್ ಹೆಗ್ಡೆ ಎಂ.ಮೊಳಹಳ್ಳಿ ಹೇಳಿದರು.
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 500 ಕೋಟಿ ಉಚಿತ ಪ್ರಯಾಣ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕುಂದಾಪುರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದ ಸಂಭ್ರಮೋತ್ಸವದಲ್ಲಿ ಮಾತನಾಡಿದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮಾತನಾಡಿದರು.
ಕೆಎಸ್‌ಆರ್‌ಟಿಸಿ ಡಿಪೊ ಮ್ಯಾನೇಜರ್ ಉದಯಕುಮಾರ್ ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ಟೊ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷೆ ಗೀತಾ ವಾಗ್ಳೆ, ಗ್ಯಾರಂಟಿ ಸಮಿತಿ ಸದಸ್ಯರಾದ ಅಭಿಜಿತ್ ಪೂಜಾರಿ, ವಾಣಿ ಶೆಟ್ಟಿ, ಆಶಾ ಕರ್ವಾಲೊ, ನಾರಾಯಣ ಆಚಾರ್ ಕೋಣಿ, ಜಹೀರ್ ಅಹ್ಮದ್, ಪ್ರಾಧಿಕಾರ ಸದಸ್ಯ ಚಂದ್ರ ಅಮೀನ್, ಕೆಡಿಪಿ ಸದಸ್ಯ ರಮೇಶ್ ಶೆಟ್ಟಿ ವಕ್ವಾಡಿ, ಮುಖಂಡರಾದ ವಿಕಾಸ್ ಹೆಗ್ಡೆ, ಸರಸು ಬಂಗೇರ, ಶೋಭಾ ಪುತ್ರನ್, ಜಾನಕಿ ಬಿಲ್ಲವ ಕೋಟೇಶ್ವರ, ರೋಶನ್ ಶೆಟ್ಟಿ, ಅಶೋಕ್ ಸುವರ್ಣ ಇದ್ದರು.