ವಾಕಥಾನ್‌ನಲ್ಲಿ ಗಮನ ಸೆಳೆದ ಮಹಿಳೆಯರು

7
Published on

ಮೈಸೂರು: ರೋಟರಿ ಮೈಸೂರು ವೆಸ್ಟ್ ಹಾಗೂ ವಿ ಸಖಿ ಸಂಸ್ಥೆ ವತಿಯಿಂದ ಭಾನುವಾರ ಆಯೋಜಿಸಿದ್ದ ಸೀರೆ ನಡಿಗೆ (ವಾಕಥಾನ್) ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿಯಿ.
ಮಹಿಳೆಯರನ್ನು ಕಾಡುತ್ತಿರುವ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ವಾಕಥಾನ್‌ನಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಗಮನ ಸೆಳೆದರು.

ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಸ್ಥಾನದ ಮುಂಭಾಗದಿಂದ ಸುಮಾರು 300 ಮಹಿಳೆಯರು ವಾಕಥಾನ್‌ನಲ್ಲಿ ಭಾಗವಹಿಸಿದ್ದರು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸೀರೆ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸ್ತನ ಕ್ಯಾನ್ಸರ್ ಜಗತ್ತಿನ ಕಾಯಿಲೆಯಾಗಿ ಮಾರ್ಪಟ್ಟಿದೆ. ಹೆಚ್ಚು ಮಹಿಳೆಯರು ಅರಿವಿನ ಕೊರತೆಯಿಂದ ಸ್ತನ ಕ್ಯಾನ್ಸರ್‌ಗೆ ಒಳಗಾಗುತ್ತಿದ್ದಾರೆ ಎಂದು ಬೇಸರಿಸಿದರು.

ಎಷ್ಟೋ ಜನ ಹೆಣ್ಣುಮಕ್ಕಳು ಸಂಕೋಚ ಹಾಗೂ ಮುಜುಗರದಿಂದ ಸ್ತನ ತಪಾಸಣೆ ಮಾಡಿಕೊಳ್ಳಲು ಹಿಂದೇಟು ಹಾಕುತ್ತಾರೆ. ಅಲ್ಲದೆ, ಕಾಯಿಲೆ ಇದೆ ಎಂದು ತಿಳಿದಾಗ ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಇದೀಗ ಆಧುನಿಕ ಚಿಕಿತ್ಸಾ ವ್ಯವಸ್ಥೆಗಳು ಬಂದಿದೆ. ಯಾವುದೇ ಭಯವಿಲ್ಲದೆ ಮಹಿಳೆಯರು ಕಾಯಿಲೆಯನ್ನು ಮೆಟ್ಟಿ ನಿಲ್ಲಬೇಕೆಂದು ಕಿವಿಮಾತು ಹೇಳಿದರು. ನಂತರ 40 ಮಹಿಳೆಯರಿಗೆ ಉಚಿತವಾಗಿ ಸ್ತನ ಕ್ಯಾನ್ಸರ್ ತಪಾಸಣೆಯನ್ನು ಮಾಡಲಾಯಿತು. ಅಲ್ಲದೆ, 8 ಮಹಿಳೆಯರು ಕೇಶದಾನ ಮಾಡಿದರು.
ರೋಟರಿ ಕ್ಲಬ್ ಅಧ್ಯಕ್ಷೆ ಎಲಿಜಬೆತ್ ಶಕುಂತಲಾ, ವಿ ಸಖಿ ಅಧ್ಯಕ್ಷೆ ಭಾನು ಆನಂದ್ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net