

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಅಪರಿಚಿತ ಶವ ಪತ್ತೆಯಾಗಿದ್ದು , ಕೊಲೆ ನಡೆದಿರುವ ಕುರಿತು ಪೊಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಆರೋಪಿಗಳು ಸಾಕ್ಷಿ ನಾಶಕ್ಕಾಗಿ ಶವವನ್ನು ಸುಟ್ಟು ಹಾಕಲು ಯತ್ನಿಸಿದ್ದು ಅರ್ದ ದೇಹ ಸುಟ್ಟ ಶವ ಪತ್ತೆಯಾಗಿದೆ.
ಈ ಕುರಿತು ಮಹಾಗಾಂವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಕಮಲಾಪುರ ಸಿಪಿಐ ವಿ.ನಾರಾಯಣ, ಮಹಾಗಾಂವ ಪಿಎಸ್ ಐ ಆಶಾ ರಾಠೋಡ ಭೇಟಿ ನೀಡಿ ಪರಿಶಿಲಿಸಿದ್ದಾರೆ.