ಮಹಿಳೆಯರ ಸುರಕ್ಷತೆಗೆ ಸರ್ಕಾರ ಮುಂದಾಗಲಿ, ಹೊಸಪೇಟೆಯಲ್ಲಿ ಸಿಪಿಐಎಂ ಮುಖಂಡರ ಪ್ರತಿಭಟನೆ

210720 Hosapete CPIM Protest
ಹೊಸಪೇಟೆಯಲ್ಲಿ ಸಹಾಯಕ ಆಯುಕ್ತ ಶೇಕ್ ತನ್ವೀರ್ ಆಸೀಫ್‌ಗೆ ಸಿಪಿಐಎಂ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
Published on

ಹೊಸಪೇಟೆ: ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸಿ ಕಚೇರಿ ಮುಂದೆ ಸಿಪಿಐಎಂ ಮುಖಂಡರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘದ ಕಾರ್ಯದರ್ಶಿ ಆರ್.ಭಾಸ್ಕರರೆಡ್ಡಿ ಮಾತನಾಡಿ, ಕರೊನಾ ಲಾಕ್‌ಡೌನ್ ಸಮಯದಲ್ಲಿ ಶೇ.50ಕ್ಕೂ ಅಧಿಕ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ವಿಶ್ವಸಂಸ್ಥೆ ವರದಿ ನೀಡಿದೆ. ಅಲ್ಲದೆ, ಕೋವಿಡ್ ನೆಪದಲ್ಲಿ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸುತ್ತಿಲ್ಲ. ಇದರಿಂದ ವಿಧವೆಯರು, ಒಂಟಿ ಹಾಗೂ ವಿಮುಕ್ತ ದೇವದಾಸಿಯರಿಗೆ ಸುರಕ್ಷತೆ ಇಲ್ಲವಾಗಿದೆ. ಇನ್ನು ಮನೆ ಕೆಲಸಗಾರರು, ಬೀದಿಬದಿ ವ್ಯಾಪಾರಿಗಳು ಸೇರಿ ವಿವಿಧೆಡೆ ಕಾರ್ಯನಿರ್ವಹಿಸುವ ಮಹಿಳೆಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಕೆ.ನಾಗರತ್ನಮ್ಮ ಮಾತನಾಡಿ, ಹಗರಿಬೊಮ್ಮನಹಳ್ಳಿ ತಾಲೂಕಿನ ಸಾಲ್ಮೂರಹಳ್ಳಿ ಗ್ರಾಮದಲ್ಲಿ ನಡೆದ ಮಹಿಳೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಮೃತಳ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಸಹಾಯಕ ಆಯುಕ್ತ ಶೇಕ್ ತನ್ವೀರ್ ಆಸೀಫ್ ಮೂಲಕ ಸಿಎಂಗೆ ಮನವಿ ಸಲ್ಲಿಸಿತು. ಮುಖಂಡರಾದ ಎಂ.ಜಂಬಯ್ಯ ನಾಯ್ಕ, ಎ.ಕರುಣಾನಿಧಿ, ಎಂ.ಗೋಪಾಲ್, ಎನ್.ಯಲ್ಲಾಲಿಂಗ, ಶಕುಂತಲಾ, ಕೆ.ಎಂ.ಸ್ವಪ್ನಾ, ವಿ.ಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net