

ಮಡಿಕೇರಿ: ಒಡಿಪಿ ಸಂಘದ ಮುಖಾಂತರ ಮಹಿಳೆಯರು ಸಬಲೀಕರಣ ಹೊಂದಬೇಕು ಎಂದು ಒಡಿಪಿ ಸಂಸ್ಥೆಯ ಜಿಲ್ಲಾ ಸಂಯೋಜಕಿ ಜಾಯ್ಸಿ ಮೇನೆಜರ್ಸ್ ಹೇಳಿದರು.
ಮಾಲ್ದಾರೆ ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳೋದಯ ಮಹಿಳಾ ಒಕ್ಕೂಟ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಒಡಿಪಿ ಸಂಸ್ಥೆಯ ಸಂಘದ ಮಹಿಳೆಯರಿಗೆ ನಡೆದ ಲಿಂಗಾದರಿತ ದೌರ್ಜನ್ಯ ನಿವಾರಿಸುವ ಅರಿವು ಶಿಬಿರ ಹಾಗೂ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಲಿಂಗ ಸಮಾನತೆ ಸಾಧಿಸಬೇಕು. ಎಲ್ಲರೂ ಸಮಾನ ಎಂಬ ದೃಷ್ಟಿಯನ್ನು ಬೆಳೆಸಿಕೊಳ್ಳಬೇಕು. ಜತೆಗೆ ಒಡಿಪಿ ಸಂಘದ ಮುಖಾಂತರ ಮಹಿಳೆಯರು ಸಬಲೀಕರಣ ಹೊಂದಬೇಕು ಎಂದರು.
ಮಹಿಳಾ ಸಬಲೀಕಣ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಸಂಯೋಜಕಿ ಬಿ.ಎಸ್.ಮಮತ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ದೊರೆಯುವ ಯೋಜನೆಗಳಾದ ಮಾತೃವಂದನಾ, ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ಸಂತ್ವಾನ, ಮಹಿಳಾ ಸಹಾಯವಾಣಿ, ಮಕ್ಕಳ ಸಹಾಯವಾಣಿ, ಭಾಗ್ಯಲಕ್ಷಿ, ಬೇಟಿ ಬಚಾವೋ ಬೇಟಿ ಪಡಾಪೋ ಯೋಜನೆ ಬಗ್ಗೆ ಸಂಘದ ಮಹಿಳೆಯರಿಗೆ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾದ ಜೆಂಡರ್ ಸ್ಪೆಷಲಿಸ್ಟ್ ಎಸ್.ಆರ್.ಕೇಶಿನಿ ಮಾತನಾಡಿ, ಮಹಿಳೆಯರು ಪುರು?ರಷ್ಟೆ ಸಮಾನರು. ತನ್ನಲ್ಲಿ ಆತ್ಮಸ್ಥೈರ್ಯ ಬೆಳಸಿಕೊಂಡು ಸಮಾಜದಲ್ಲಿ ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಗುರುತಿಸಿಕೊಳ್ಳಬೇಕು. ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ಶಿಕ್ಷಣವಂತರಾಗಬೇಕು. ಸಾಮಾಜಿಕ ಸಮಸ್ಯೆಯನ್ನು ಅರಿತುಕೊಂಡು ತಮ್ಮ ಸಮಸ್ಯೆಯನ್ನು ತಾವೇ ಗುರುತಿಸಿಕೊಂಡು ಸಮಸ್ಯೆಯನ್ನು ಬಗೆಹರಿಸುವ?್ಟರ ಮಟ್ಟಿಗೆ ಮಹಿಳೆ ಸಬಲೀಕರಣ ಹೊಂದಬೇಕು. ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಸಂದರ್ಭದಲ್ಲಿ ೧೮೧ ಮಹಿಳಾ ಸಹಾಯವಾಣಿಗೆ ದೂರನ್ನು ಸಲ್ಲಿಸಬಹುದು. ಹಾಗೂ ಕಾನೂನು ಸೇವಾ ಪ್ರಾಧಿಕಾರದಲ್ಲಿ ಮಹಿಳೆಯರು ದೂರನ್ನು ದಾಖಲಿಸಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದರು.
ಆರೋಗ್ಯ ಇಲಾಖೆ ಸಮುದಾಯ ಸುರಕ್ಷಧಿಕಾರಿ ಜ್ಯೋತಿ ಅವರು ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಮಾಲ್ದಾರೆ ಗ್ರಾ.ಪಂ.ಉಪಾಧ್ಯಾಕ್ಷರು, ಆಶಾ ಕಾರ್ಯಕರ್ತರು, ಸಂಘದ ಮಹಿಳೆಯರು, ಒಡಿಪಿ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.