ಸಮಾಜಮುಖಿ ಕೆಲಸದಲ್ಲಿ ಮಹಿಳೆಯರು ತೊಡಗಿಸಿಕೊಳ್ಳಿ

thrinethra
Published on

ಮಡಿಕೇರಿ: ಮಹಿಳೆಯರು ಸಮಾಜಮುಖಿ ಕೆಲಸದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ.ಪಿ.ಸುಕುಮಾರ್ ವಿಕಿಮಾತು ಹೇಳಿದರು.

ತೊಂಬತ್ತುಮನೆ ತ್ರಿನೇತ್ರ ಯುವಕ ಸಂಘದ ಸಭಾಂಗಣದಲ್ಲಿ ಸೋಮವಾರ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯದ ಮಡಿಕೇರಿ ತಾಲೂಕಿನ ಬೆಟ್ಟಗೇರಿ ವಲಯದ ಹಾಕತ್ತೂರು ಸ್ಪಂದನ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

೨೫ ವರ್ಷದ ಹಿಂದೆ ಸ್ವ ಸಹಾಯ ಸಂಘದ ಪ್ರಾರಂಭದ ದಿನಗಳನ್ನು ಮೆಲುಕು ಹಾಕಿದ ಅವರು, ಮಹಿಳೆಯರು ಸಮಾಜಮುಖಿ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಈ ಜ್ಞಾನ ವಿಕಾಸ ಕೇಂದ್ರ ಸಹಕಾರಿ ಆಗಿದೆ. ಅದೇ ರೀತಿಯಲ್ಲಿ ಮಹಿಳೆಯರು ಸಮಾಜ ಮುಖಿ ಕೆಲಸದಲ್ಲಿ ಹೆಚ್ಚಾಗಿ ತಮ್ಮನ್ನು ತಾವು ತೊಡಗಿಸುವಂತೆ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕು ಯೋಜನಾಧಿಕಾರಿ ಪುರುಷೋತ್ತಮ ಮಾತನಾಡಿ, ಜ್ಞಾನ ವಿಕಾಸ ಕೇಂದ್ರದ ಸದಸ್ಯರೆಲ್ಲರು ಎಲ್ಲಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡು, ಅವರವರ ಜೀವನದಲ್ಲಿ ಮತ್ತು ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ಬೆಳೆಸುತ್ತ ಬರುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ. ಅದೇ ರೀತಿ ಸ್ವ ಉದ್ಯೋಗ ತರಬೇತಿಗಳ ಸದೂಪಯೋಗ ಪಡೆದುಕೊಳ್ಳುವ ಮೂಲಕ ಸ್ವಾವಲಂಬಿ ಜೀವನ ನಡೆಸುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ಪಂದನ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಪಂದನ ಜ್ಞಾನವಿಕಾಸ ಕೇಂದ್ರದ ಸದಸ್ಯ ವಿಮಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಾಕತ್ತೂರು ಒಕ್ಕೂಟದ ಕಾರ್ಯದರ್ಶಿ ಹರಿಣಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಾಲಿನಿ, ಮೇಲ್ವಿಚಾರಕಿ ವಿದ್ಯಾ, ಸೇವಾಪ್ರತಿನಿಧಿ ಕವಿತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net