ಮಹಿಳೆಯರು ಸ್ವಾವಲಂಬಿಗಳಾಗಬೇಕು: ನಟರಾಜ

karyagara
Published on

ಮಡಿಕೇರಿ: ಸರ್ಕಾರದಿಂದ ದೊರಕುವ ವಿವಿಧ ಯೋಜನೆಯ ಸೌಲಭ್ಯ ಮತ್ತು ತರಬೇತಿಗಳನ್ನು ಪಡೆದು ಮಹಿಳೆಯರು ಪರಾವಲಂಬಿಗಳಾಗದೆ ಸ್ವಾವಲಂಬಿಗಳಾಗಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಗಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ ತಿಳಿಸಿದರು.


ಕೂಡಿಗೆಯ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಇತ್ತೀಚೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಯೂನಿಯನ್ ಬ್ಯಾಂಕ್, ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಇವರ ಸಹಯೋಗದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಡಿಯಲ್ಲಿ ಜೀವನ ಕೌಶಲ್ಯ ಮತ್ತು ಉದ್ಯಮಶೀಲತೆ ಜಾಗೃತಿ ಕಾರ್ಯಗಾರ ಪಾಲ್ಗೊಂಡು ಮಾತನಾಡಿದರು.


ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದ ಕುರಿತು ವಿವರಿಸುತ್ತಾ ಹೆಣ್ಣು ಮಕ್ಕಳ ಶಿಕ್ಷಣ, ಲಿಂಗಾನುಪಾತ, ಭ್ರೂಣಹತ್ಯೆ, ಜೀವನ ಕೌಶಲ್ಯ ಮತ್ತು ಉದ್ಯಮ ಶೀಲತೆಯ ಪ್ರಾಮುಖ್ಯತೆ ಕುರಿತು ತಿಳಿಸಿದರು.


ಅಲ್ಲದೇ ಮಹಿಳೆಯರಿಗಾಗಿ ಇಲಾಖೆಯಲ್ಲಿರುವ ವಿವಿಧ ಯೋಜನೆಗಳಾದ ಗೃಹಲಕ್ಷ್ಮೀ ಯೋಜನೆ, ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಪೋಷಣ್ ಅಭಿಯಾನ ಯೋಜನೆ, ಉದ್ಯೋಗಿನಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್ ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಮುಂತಾದವುಗಳ ಬಗ್ಗೆ ತಿಳಿಸಿದರು.


ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಪ್ರಕಾಶ್‌ರವರು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕಾರ್ಯಾಗಾರದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್‌ನ ಆಡಳಿತಾಧಿಕಾರಿ ಪ್ರಭಾವತಿ, ಸ್ವ-ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net