ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆ ಸರ್ಕಾರದ ಯೋಜನೆಗಳನ್ನು ಮಹಿಳೆಯರು ಸದುಪಯೋಗ ಪಡೆದುಕೊಳ್ಳಿ; ಪಿಡಿ

RAICHUR
RAICHUR
Published on

ರಾಯಚೂರು ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರು

ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿ¯್ಲÁ ಪಂಚಾಯತ್ ಯೋಜನಾ ನಿರ್ದೇಶಕರಾದ ಶರಣಬಸವ ಅವರು ಹೇಳಿದರು.

ನಗರದ ಜಿ¯್ಲÁ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿ¯್ಲÁ ಪಂಚಾಯತï ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಸ್ವ-ಸಹಾಯ ಸಂಘಗಳ ಮೂಲಕ ತಳಮಟ್ಟದಲ್ಲಿ ಮಹಿಳಾ ಅಭಿವೃದ್ಧಿ ಸಾಽಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರು ಚಾಲಕರಾಗಿz್ದÁರೆ. ಅದು ಕೇವಲ ವಾಹನದ ಚಲಾವಣೆ ಮಾತ್ರವಲ್ಲ, ಸಾಮಾಜಿಕ ಸಶಕ್ತೀಕರಣವಾಗಿದೆ. ಮಹಿಳಾ ಸಶಕ್ತೀಕರಣ ನಿಟ್ಟಿನಲ್ಲಿ ಸ್ವಸಹಾಯ ಸಂಘಗಳಿಗೆ ಸಾಲ, ಉದ್ಯೋಗಿನಿ ನೆರವು, ಕೌಶಲಾಭಿವೃದ್ಧಿ ಕಾರ್ಯಕ್ರಮವನ್ನು ಸರ್ಕಾರ ಮಾಡುತ್ತಿದೆ. ಮಹಿಳೆಯರು ಪರಸ್ಪರ ಗೌರವಿಸುವ, ಉತ್ತೇಜಿಸುವ ಕಾರ್ಯ ಆಗಬೇಕು ಎಂದರು.

ಗಣಿ ಮತ್ತು ಭೂ ವಿe್ಞÁನ ಇಲಾಖೆಯ ಹಿರಿಯ ಭೂ ವಿe್ಞÁನಿ ಪುಷ್ಪಲತಾ ಎಸ್.ಕವಲೂರು ಮಾತನಾಡಿ, ಹೆಣ್ಣು ಸಂಸಾರದ ಕಣ್ಣು ಹೆಣ್ಣೆಂದರೆ ಮನೆಯ ಬೆಳಗುವ ದೀಪ. ನಾಲ್ಕು ಗೋಡೆಗೆ ಸೀಮಿತವಾಗಿದ್ದ ಹೆಣ್ಣು ಇಂದು ಕೈಯಾಡಿಸದ ಕ್ಷೇತ್ರವಿಲ್ಲ. ಎ¯್ಲÁ ಕ್ಷೇತ್ರದಲ್ಲಿ ಗಂಡಿಗೆ ಸಮಾನವಾಗಿ ಮಹಿಳೆಯರು ನಿಂತಿದ್ದಾರೆ. ತನ್ನದೇ ಛಾಪು ಮೂಡಿಸಿ ತಾನು ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ಸಾಭೀತು ಪಡಿಸಿz್ದÁಳೆ ಎಂದರು.

ಜಿಪಂ ಮುಖ್ಯ ಯೋಜನಾಽಕಾರಿ ಡಾ.ಟಿ.ರೋಣಿ ಅವರು ಮಾತನಾಡಿ, ಅಂತರಾಷ್ಟಿçÃಯ ಮಹಿಳಾ ದಿನ ಆಚರಣೆ ಪ್ರತಿವರ್ಷ ಮಾ.೮ ರಂದು ಜÁಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವನ್ನು ಬಹಳ ಸಂತೋಷವಾಗಿ ಶಾಲಾ, ಕಾಲೇಜು, ಕಚೇರಿಗಳಲ್ಲಿ ಸಹ ಇಂದು ಆಚರಣೆ ಮಾಡಲಾಗುತ್ತದೆ. ಪ್ರತಿ ಕುಟುಂಬ, ದೇಶದ ದೊಡ್ಡ ಸೈನಿಕ ಶಕ್ತಿ ಎಂದೇ ಮಹಿಳೆಯರನ್ನು ಬಣ್ಣಿಸಲಾಗುತ್ತದೆ. ಅಂದು ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನವಾಗಿಯೂ ಈಗ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಶಕ್ತಿ ಒಕ್ಕೂಟದ ಜಿ¯್ಲÁ ಅಧ್ಯಕ್ಷ ಶ್ರೀದೇವಿ ಶ್ರೀನಿವಾಸ,ಜಿಪಂ ಲೆಕ್ಕಾಽಕಾರಿ ವಿಜಯಶಂಕರ,ಯು ಹುಡೇದï, ನವೀನï ಕುಮಾರï, ಮೇನಕಾ ಪಾಟೀಲï,ಇಂದಿರಾ ಆರï, ಡಾ.ನಂದಿತಾ, ಶರಣಮ್ಮ, ಶ್ರೀದೇವಿ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net