

ನಂಜನಗೂಡು: ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರದ ರಾಂಪುರ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಬುಧವಾರ ಮಹಿಳಾ ಗ್ರಾಮ ಸಭೆ ನಡೆಸಲಾಯಿತು.
ಗ್ರಾಪಂ ಅಧ್ಯಕ್ಷೆ ಎಚ್.ಎಸ್.ರಾಣಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಆರ್. ಹನುಮಯ್ಯ ಮಾತನಾಡಿ, ಮಹಿಳೆಯರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ತಿಳಿಸಿದರು. ಬಾಲ್ಯ ವಿವಾಹ ತಡೆಯುವ ಬಗ್ಗೆ ಹಾಗೂ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಶಿಕ್ಷಣ ಬಹುಮುಖ್ಯ ಎಂದ ಅವರು, ಮೊಬೈಲ್ ಬಳಕೆಯಿಂದ ಮಕ್ಕಳಿಗೆ ಆಗುವ ದುಷ್ಪರಿಣಾಮ ಬಗ್ಗೆ ತಿಳಿಸಿದರು.
ಸಂಜೀವಿನಿ ಒಕ್ಕೂಟದ ಮುಖ್ಯಸ್ಥೆ ಲತಾ, ಕಾರ್ಯದರ್ಶಿ ಸಿ.ಕೆ.ವಿಜಯರಾಜ್, ಉಪಾಧ್ಯಕ್ಷ ಶ್ರೀನಿವಾಸ್, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಕೃಷಿ ಸಖಿ, ಪಶು ಸಖಿ, ಪಂಚಾಯಿತಿ ಸಿಬ್ಬಂದಿ, ಗ್ರಂಥಪಾಲಕರು ಇದ್ದರು.