ಅಪಾರ್ಟ್​​ಮೆಂಟ್​ನಿಂದ ಜಿಗಿದು ಪ್ರಾಣಬಿಟ್ಟ ಗೃಹಿಣಿ

Crime News
Published on

ಬೆಂಗಳೂರು: ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆ ನಾಲ್ಕನೇ ಮಹಡಿಯಿಂದ ಜಿಗಿದು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಟ್ಟೇನಹಳ್ಳಿಯಲ್ಲಿ ನಡೆದಿದೆ.

ಕೊತ್ತನೂರು ದಿಣ್ಣೆಯ ನಿವಾಸಿ ಸೋನು ಪೂಜಾರ್ (33) ಮೃತಪಟ್ಟಿರುವ ಮಹಿಳೆ.

ಮನೆಯಲ್ಲಿ ಯಾರು ಇಲ್ಲದೇ ಇದ್ದಾಗ ಆತ್ಮಹತ್ಯೆ

ಕೊತ್ತನೂರು ದಿಣ್ಣೆಯ 4 ಅಂತಸ್ತಿನ ಮನೆಯಲ್ಲಿ ನಿರಂಜನ್ ಪೂಜಾರ್ ಹಾಗೂ ಸೋನು ದಂಪತಿ ವಾಸಿಸುತ್ತಿದ್ದರು. ಕೆಲಸದ ಹಿನ್ನೆಲೆಯಲ್ಲಿ ನಿರಂಜನ್ ಅವರು ಮುಂಬೈಗೆ ತೆರಳಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ಮಂಗಳವಾರ ಮುಂಜಾನೆ 5 ಗಂಟೆಗೆ ಮನೆಯ ಮಹಡಿಗೆ ತೆರಳಿ 4ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.

ಇದು ಆಕಸ್ಮಿಕವಾಗಿ ಸಂಭವಿಸಿದೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಗೊತ್ತಾಗಲಿಲ್ಲ. ಸ್ಥಳಕ್ಕೆ ಧಾವಿಸಿದ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ನಿರಂಜನ್ ಅವರಿಗೆ ವಿಷಯ ತಿಳಿಸಿದ್ದಾರೆ.

ಪ್ರಕರಣ ದಾಖಲು

ಸೋನು ಅವರು ಸೋಮವಾರ ತಡರಾತ್ರಿ 1 ಗಂಟೆ ಸುಮಾರಿಗೆ ಯಾರೊಂದಿಗೋ ಮೊಬೈಲ್‌ನಲ್ಲಿ ಮಾತನಾಡುತ್ತಾ ಜಗಳ ಮಾಡುತ್ತಿದ್ದರು ಎಂದು ನೆರೆ-ಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net