ಮಹಿಳಾ ವಿವಿ ಕ್ರೀಡಾಪಟುಗಳು ಚೆಸ್​ ಸ್ಪರ್ಧೆಗೆ ಆಯ್ಕೆ

Women University Athletes Selected for Chess Competition
ವಿಶಾಖ ಪಟ್ಟಣದಲ್ಲಿ ನಡೆಯಲಿರುವ ಚೆಸ್​ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿನಿಯರೊಂದಿಗೆ ಮಹಿಳಾ ವಿವಿ ಸಿಬ್ಬಂದಿಗಳಿದ್ದಾರೆ.
Published on

ವಿಜಯಪುರ : ನಗರ ಹೊರ ವಲಯದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಪಟುಗಳು ವಿಶಾಖ ಪಟ್ಟಣದಲ್ಲಿ ನಡೆಯಲಿರುವ ಚೆಸ್​ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತಂಡದ ಕ್ರೀಡಾಪಟುಗಳ ಜತೆಗೆ ತಂಡದ ವ್ಯವಸ್ಥಾಪಕರಾಗಿ ಬಳ್ಳಾರಿಯ ಅಲ್ಲಂ ಸುಮಂಗಲಮ್ಮ ಮಹಿಳಾ ಮಹಾವಿದ್ಯಾಲಯದ ಅಶೋಕ್​ ಭಾಗವಹಿಸಲಿದ್ದಾರೆ.

ಆಯ್ಕೆಯಾದ ಕ್ರೀಡಾಪಟುಗಳ ತಂಡಕ್ಕೆ ವಿವಿಯ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್​.ಎಂ. ಚಂದ್ರಶೇಖರ, ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಡಾ. ಹನುಮಂತಯ್ಯ ಪೂಜಾರ, ಕ್ರೀಡಾ ವಿಭಾಗದ ಮುಖ್ಯಸ್ಥ ಪ್ರೊ. ಸಕ್ಪಾಲ್​ ಹೂವಣ್ಣ ಶುಭ ಹಾರೈಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net