

ವಿಜಯವಾಣಿ ಸುದ್ದಿಜಾಲ ಧಾರವಾಡ
ಮಹಿಳಾ ದಿನ ನಿಮಿತ್ತ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ ವತಿಯಿಂದ ಏ. 4ರಂದು ವೇದಿಕೆಯ ಧಾರವಾಡ ತಾಲೂಕು ಮಹಿಳಾ ಘಟಕ ಹಾಗೂ ಯುವ ಘಟಕ ಉದ್ಘಾಟನೆ ಸಮಾರಂಭ ಏರ್ಪಡಿಸಲಾಗಿದೆ ಎಂದು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಜುಳಾ ಕುಶಪ್ಪನವರ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಪಾಟೀಲ ಪುಟ್ಟಪ್ಪ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ಚನ್ನಬಸವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು . ಮಾಜಿ ಶಾಸಕ ಅಮೃತ ದೇಸಾಯಿ, ತಾಪಂ ಮಾಜಿ ಸದಸ್ಯ ಮಹದೇವಪ್ಪ ದಂಡಿನ ಅತಿಥಿಗಳಾಗಿ ಆಗಮಿಸುವರು. ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ. ಮಹೇಶಕುಮಾರ ಅಧ್ಯಕ್ಷತೆ ವಹಿಸುವರು ಎಂದರು.
ಆಶಾ ಕಾರ್ಯಕರ್ತರು ಹಾಗೂ ರೈತ ಮಹಿಳೆಯರು ಸೇರಿ 250 ಸಾಧಕಿಯರಿಗೆ ಸನ್ಮಾನ ಹಾಗೂ ಬಡ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಗುವುದು ಎಂದರು.
ವಿಜಯಲಕ್ಷ್ಮೀ ಕಿತ್ತೂರ, ಸುಧಾ ಕಬ್ಬೂರ, ಶ್ರೀದೇವಿ ತಳವಾರ, ಇತರರು ಇದ್ದರು.