ಮಹಿಳಾ ಜಾಗೃತಿ ಸಮಾವೇಶ 9ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ವಿದ್ಯಾವರ್ಧಕ ಸಂಘದ ಮಹಿಳಾ ಮಂಟಪದ ಅಡಿ ಮಹಿಳಾ ಜಾಗೃತಿ ಸಮಾವೇಶವನ್ನು ಏ. 9ರಂದು ಬೆಳಗ್ಗೆ 10.30ಕ್ಕೆ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿ ದಿವ್ಯ ಪ್ರಭು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಡಾ. ಜಯಶ್ರೀ ಅಥಿಯಾಗಿ ಆಗಮಿಸುವರು. ಸಮಾವೇಶದಲ್ಲಿ ಮಹಿಳೆಯರಿಗೆ ಸಂಬಂಧಪಟ್ಟ ಕಾನೂನುಗಳ ಕುರಿತು ಇಬ್ಬರು ತರು ಉಪನ್ಯಾಸ ನೀಡಲಿದ್ದಾರೆ. ನಂತರ ಸಂವಾದ ನಡೆಯಲಿದೆ.

ನಂತರ ಮಹಿಳೆಯರಿಗೆ ನಾ ಮೆಚ್ಚಿದ ಮಹಿಳಾ ಸಾಧಕಿ ವಿಷಯವಾಗಿ ವೇಷಭೂಷಣ ಸ್ಪರ್ಧೆ ನಡೆಸಲಾಗುವುದು. ಪ್ರತಿಯೊಬ್ಬರಿಗೆ ಒಂದು ನಿಮಿಷ ಮಾತ್ರ ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net