ವಕೀಲರ ಸಂಘದಿಂದ ಮಹಿಳಾ ದಿನಾಚರಣೆ

womens day
Published on

ಬೆಂಗಳೂರು ಗ್ರಾಮಾಂತರ: ಮಹಿಳೆಯರು ಇಂದಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಆದ ಸಾಧನೆ ಮಾಡುತ್ತಿದ್ದು ಪುರುಷರಿಗೆ ಸರಿಸಮಾನನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಪ್ರಸ್ತುತ ಸಮಾಜದಲ್ಲಿ ಪುರುಷರು ಹಾಗೂ ಮಹಿಳೆಯರು ಎಂಬ ಅಸಮಾನತೆ ದೂರವಾಗಿದೆ ಎಂದುದೊಡ್ಡಬಳ್ಳಾಪುರ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶೆ ಶಿಲ್ಪಾ ಹೇಳಿದರು.

ದೊಡ್ಡಬಳ್ಳಾಪುರದಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು. ಪುರುಷ ಸಮಾಜವು ತನ್ನ ಮನೆಯಲ್ಲದೆ ಎಲ್ಲ ಕಡೆಗಳಲ್ಲಿಯೂ ಮಹಿಳೆಯರಿಗೆ ಗೌರವ ನೀಡುವ ಮನೋಭಾವನೆ ಬೆಳೆಸಿಕೊಳ್ಳಬೇಕು ಮಹಿಳೆಯರು ಸಮಾಜಕ್ಕೆ ತಮ್ಮದೆ ಆದ ಕೊಡುಗೆಗಳನ್ನು ನೀಡುತ್ತಿದ್ದಾರೆ ಎಲ್ಲ ಕ್ಷೇತ್ರಗಳಲ್ಲೂ ಸಾಧನೆಯ ಶಿಖರ ಏರಿದ್ದಾರೆ ಎಂದು ಹೇಳಿದರು. ಹೆಣ್ಣು ದೇಶದ ಕಣ್ಣು ಎನ್ನಬಹುದು, ಕುಟುಂಬ ನಿರ್ವಹಣೆ ಜತೆಗೆ ಎಲ್ಲ ರೀತಿಯ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯ ಮಹಿಳೆಯರಿಗಿದೆ ಎಂದು ಸಿವಿಲ್ ನ್ಯಾಯಾಧೀಶ ಪ್ರವೀಣ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net