ಮಹಿಳೆಯರ ಸರ್ವಾಂಗೀಣ ಬೆಳವಣಿಗೆಗೆ ಪೂರಕ : ಕೆ.ವಿ.ಜಯರಾಮ್ ಅನಿಸಿಕೆ

New Project
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸಂಜೀವಿನಿಯು ವಿವಿಧ ಯೋಜನೆಗಳನ್ನು ಹಮ್ಮಿಕೊಂಡು ಮಹಿಳೆಯರ ಸವಾರ್ಂಗೀಣ ಬೆಳವಣಿಗೆಗೆ ಬದ್ಧವಾಗಿದೆ. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಪಂ ಯೋಜನಾ ನಿರ್ದೇಶಕ ಕೆ.ವಿ.ಜಯರಾಮ್ ಹೇಳಿದರು.

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜಿಲ್ಲಾ ಸಂಜೀವಿನಿ ಅಭಿಯಾನ ನಿರ್ವಹಣಾ ಘಟಕ ದಕ್ಷಿಣ ಕನ್ನಡ, ತಾಲೂಕು ಅಭಿಯಾನ ನಿರ್ವಹಣಾ ಘಟಕ, ತಾಲೂಕು ಪಂಚಾಯಿತಿ ಬೆಳ್ತಂಗಡಿ, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ, ಸಂಗಮ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ, ಕೊಕ್ಕಡ ಗ್ರಾಪಂ ಜಂಟಿ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸಂಜೀವಿನಿ ಸಂತೆ ಉದ್ಘಾಟಿಸಿ ಮಾತನಾಡಿದರು.

ತಾಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್., ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನೇತ್ರಾವತಿ ತಾಲೂಕು ಮಟ್ಟದ ಒಕ್ಕೂಟದ ಅಧ್ಯಕ್ಷೆ ಮಧುರ ಅಧ್ಯಕ್ಷತೆ ವಹಿಸಿದ್ದರು.

ಕೊಕ್ಕಡ ಗ್ರಾಪಂ ಅಧ್ಯಕ್ಷೆ ಬೇಬಿ, ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಕಾರ್ಯದರ್ಶಿ ಗಿರಿಜಾ ಕೆದಿಲಾಯ, ಸಂಗಮ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಅಧ್ಯಕ್ಷೆ ಕುಸುಮ, ಸೌತಡ್ಕ ದೇವಾಲಯದ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಪ್ರಭಾರ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ನಿತೀಶ್ ಹಾಗೂ ಕೊಕ್ಕಡ ಪಿಡಿಒ ದೀಪಕ್ ರಾಜ್ , ತಾಲೂಕು ಅಭಿಯಾನ ನಿರ್ವಹಣಾ ಘಟಕದ ಎಲ್ಲ ಸಿಬ್ಬಂದಿ, ಗ್ರಾಪಂ ಮಟ್ಟದ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಕೊಕ್ಕಡ ವಲಯ ಮೇಲ್ವಿಚಾರಕಿ ವೀಣಾಶ್ರೀ ಕೆ.ಕೆ ಸ್ವಾಗತಿಸಿ, ವೇಣೂರು ಎಂಬಿಕೆ ಸುಲತಾ ವಂದಿಸಿ, ಶಿಶಿಲ ಕೃಷಿ ಸಖಿ ವಸಂತಿ, ಶಿಬಾಜೆ ಎಲ್‌ಸಿಆರ್‌ಪಿ ಮಾಲತಿ, ಕಲ್ಮಂಜ ಎಂಬಿಕೆ ಪುಷ್ಪ ನಿರೂಪಿಸಿದರು. ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ಸ್ವಸ್ತಿಕ್ ಜೈನ್, ಟಿಎಂಐಎಸ್ ವಿನೋದ್ ಪ್ರಸಾದ್ ಸಹಕರಿಸಿದರು.

2 ಲಕ್ಷಕ್ಕೂ ಅಧಿಕ ವಹಿವಾಟು

ಸಂಜೀವಿನಿ ಸಂತೆಯಲ್ಲಿ 48 ಗ್ರಾಪಂ ಮಟ್ಟದ ಒಕ್ಕೂಟದ ಸದಸ್ಯೆಯರು ವಿವಿಧ ಬಗೆಯ ಮಾರಾಟ ಮಳಿಗೆಗಳನ್ನು ತೆರೆದು 2 ಲಕ್ಷ ರೂ.ಗೂ ಅಧಿಕ ಮೊತ್ತದ ವಹಿವಾಟು ನಡೆಸಿದರು. ಉತ್ತಮವಾಗಿ ಕಾರ್ಯನಿರ್ಹಿಸುತ್ತಿರುವ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗ್ರಾಪಂ ಮಟ್ಟದ ಒಕ್ಕೂಟಗಳಿಗೆ ಪ್ರಶಸ್ತಿ ನೀಡಲಾಯಿತು. ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಂಜೀವಿನಿ ಮಹಿಳಾ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಜೀವಿನಿ ಸದಸ್ಯೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net