ಜನನಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ

Women's Day Celebration by Janani Mahila Mandal
Published on

ಮಡಿಕೇರಿ:

ಇಲ್ಲಿನ ಜನನಿ ಮಹಿಳಾ ಮಂಡಳಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಭಾನುವಾರ ಆಚರಿಸಲಾಯಿತು. ರಾಣಿಅರುಣ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಅಪ್ಪನೆರವಂಡ ವಿಲೀನ ದೇವಯ್ಯ ಅಂತರಾಷ್ಟ್ರೀಯ ಮಹಿಳಾ ದಿನದ ಆಚರಣೆ ಬಗ್ಗೆ ಮಾತನಾಡಿ ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡು ಸದೃಢ ಭಾರತ ನಿರ್ಮಿಸುವಲ್ಲಿ ತಮ್ಮ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಡಿಸಿಸಿ ಬ್ಯಾಂಕ್ ನಿವೃತ್ತ ವ್ಯಸ್ಥಾಪಕಿ ಪಟ್ಟಡ ಪ್ರೇಮ ಕರುಂಬಯ್ಯ ಮಾತನಾಡಿ ಮಹಿಳೆಯರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾಲಂಭಿಗಳಾಗುವ ಮೂಲಕ ಅಭಿವೃದ್ಧಿಯತ್ತ ಮುನ್ನಡೆಯಬೇಕೆಂದರು.

ಕಾರ್ಯಕ್ರಮದ ಪ್ರಯುಕ್ತ ಜನನಿ ಮಹಿಳಾ ಮಂಡಳಿಯ ಸದಸ್ಯರಿಗೆ ಹಾಗೂ ಮಹಿಳೆಯರಿಗೆ ರಸಪ್ರಶ್ನೆ ಕಾರ್ಯಕ್ರಮ, ವಿವಿಧ ರೀತಿಯ ಆಟಗಳನ್ನು ಏರ್ಪಡಿಸಲಾಗಿತ್ತು. ನಂತರ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಬ್ಯಾಂಕ್ ನಿವೃತ ಅಸಿಸ್ಟೆಂಟ್ ಮ್ಯಾನೇಜರ್ ನಾಳಿಯಮಂಡ ಸುಶೀಲಾ ಗಾಂಧಿ, ನಿವೃತ್ತ ಉಪನ್ಯಾಸಕ ಪಟ್ಟಡ ಕರುಂಬಯ್ಯ, ಜನನಿ ಮಹಿಳಾ ಮಂಡಳಿ ಪ್ರಧಾನ ಕಾರ್ಯದರ್ಶಿ ತಾಯಿರಾ, ಉಪಾಧ್ಯಕ್ಷೆ ಹೇಮಾವತಿ ಪ್ರಸನ್ನ, ಖಜಾಂಚಿ ಜಯಪಾಲಕ್ಷ, ನಿರ್ದೇಶಕಿ ಪ್ರೇಮಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net