ನೈಋತ್ಯ ರೈಲ್ವೆಯಿಂದ ಮಹಿಳಾ ದಿನಾಚರಣೆ

SWR NEW
Published on

ಹುಬ್ಬಳ್ಳಿ : ನಗರದ ಗದಗ ರಸ್ತೆಯ ಚಾಲುಕ್ಯ ರೈಲ್ವೆ ಸಂಸ್ಥೆಯಲ್ಲಿ ಗುರುವಾರದಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅತಿಥಿಯಾಗಿದ್ದ ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಉದ್ಘಾಟಿಸಿದರು. ವಲಯದ ಮಹಿಳಾ ಕಲ್ಯಾಣ ಸಂಸ್ಥೆ ಅಧ್ಯಕ್ಷೆ ನಮಿತಾ ಶ್ರೀವಾಸ್ತವ ಅತಿಥಿಯಾಗಿದ್ದರು.

ಅಧ್ಯಕ್ಷತೆ ವಹಿಸಿದ್ದ ವಲಯದ ಪ್ರಧಾನ ಮುಖ್ಯ ಸಿಬ್ಬಂದಿ ಅಧಿಕಾರಿ ಆರ್. ಐವು ಮಾತನಾಡಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದ ಮಹತ್ವ ಮತ್ತು ಮಹಿಳಾ ಉದೊ್ಯೕಗಿಗಳ ಕಲ್ಯಾಣಕ್ಕಾಗಿ ನೈಋತ್ಯ ರೈಲ್ವೆ ವಲಯ ಕೈಗೊಂಡ ಯೋಜನೆಗಳನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಮತ್ತು ಮೈಸೂರು ನಿಲ್ದಾಣಗಳ ನಡುವೆ ಸಂಚರಿಸುವ ರಾಜ್ಯ ರಾಣಿ ಎಕ್ಸ್​ಪ್ರೆಸ್ ರೈಲಿನಲ್ಲಿ ಸಂಪೂರ್ಣ ಮಹಿಳಾ ಸಿಬ್ಬಂದಿಗಳೇ ಕಾರ್ಯನಿರ್ವಹಿಸಿದರು.

ವಲಯದ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಜೈನ್ ಸೇರಿದಂತೆ ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net