ಮಹಿಳಾ ದಿನಾಚರಣೆ: ಮೈಸೂರಿನಲ್ಲಿ ಮಹಿಳಾ ಕ್ರೀಡಾಕೂಟ

New-Project-1-2
Published on

ಮೈಸೂರು: ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಮುಖ್ಯವಾಗಿದ್ದು, ಪ್ರತಿಯೊಬ್ಬ ಮಹಿಳೆಯು ಯಾವುದಾದರೊಂದು ಕ್ರೀಡೆಯಲ್ಲಿ ಭಾಗವಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಎಂ. ಸವಿತಾ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಚಾಮುಂಡಿ ವಿಹಾರ ಕ್ರೀಡಾಂಗಣ ದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಮಹಿಳಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಮಹಿಳೆಯರು ಮನೆಯನ್ನು ನಿಭಾಯಿಸುವ ಜತೆಗೆ ಕಚೇರಿಯಲ್ಲೂ ಕೆಲಸ ಮಾಡುತ್ತಾರೆ. ಹಾಗಾಗಿ ಅವರಲ್ಲಿ ಒತ್ತಡಗಳು ಇದ್ದೇ ಇರುತ್ತವೆ. ಒತ್ತಡಗಳನ್ನು ಮರೆಯಲು ಕ್ರೀಡೆ ಅನಿವಾರ್ಯ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ಕೃಷ್ಣರಾಜು ಮಾತನಾಡಿ, ಹೆಣ್ಣು ಮಕ್ಕಳು ಆರೋಗ್ಯವಾಗಿರಬೇಕೆಂಬ ಉದ್ದೇಶದಿಂದ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಮಹಿಳೆಯರು ಪುರುಷರಷ್ಟೇ ಸಮರ್ಥರಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ತಮ್ಮದೇ ಆದ ಸಾಧನೆಯನ್ನು ಮಾಡಿದ್ದಾರೆ. ಕ್ರೀಡೆ ಮನಸ್ಸಿಗೆ ಉಲ್ಲಾಸವನ್ನು ಕೊಡುತ್ತದೆ. ಕೆಲಸ ಮಾಡುವ ಮಹಿಳೆಯರು ಸಹ ೆಚ್ಚಾಗಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಜೀವನದಲ್ಲಿಯೂ ಸಹ ಪ್ರತಿಯೊಬ್ಬರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿರಿ. ಸೋಲು, ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಎಂದು ಹೇಳಿದರು.

ಸಮಾರಂಭದಲ್ಲಿ ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಹಿರಿಯ ಭೂ ವಿಜ್ಞಾನಿ ಡಾ. ಪುಷ್ಪವತಿ, ಎನ್‌ಎಸ್‌ಎಸ್ ಅಧಿಕಾರಿ ಡಾ.ಲಕ್ಷ್ಮೀ ಪಲೋಡಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net