ಮಹಿಳೆಗೆ ರಕ್ಷಣೆ ನೀಡುವ ಜ್ಞಾನ, ಸಂಸ್ಕಾರ

web 1 (4)
Published on

ಚಿಕ್ಕಮಗಳೂರು: ನಕಾರಾತ್ಮಕ ಅಂಶಗಳನ್ನೇ ಯಶಸ್ಸಿನ ಮೆಟ್ಟಿಲುಗಳನ್ನಾಗಿಸಿಕೊಂಡು ಎಲ್ಲ ಕ್ಷೇತ್ರದಲ್ಲೂ ಮಹಿಳೆಯರು ಮುಂಚೂಣಿಯಲ್ಲಿರಬೇಕು ಎಂದು ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಅರುಣಕುಮಾರಿ ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ಎಸ್​ಟಿಜೆ ಕಾಲೇಜು ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದ ಮೂಲಕ ಸಾಧನೆ ಮಾಡಿ ಎಲ್ಲ ಕ್ಷೇತ್ರದಲ್ಲೂ ಮಹಿಳೆ ಬಲಗೊಳ್ಳಬೇಕು. ಸಮಾಜದಲ್ಲಿ ಶಿಕ್ಷಕರು ಮತ್ತು ಪಾಲಕರಿಂದ ಉತ್ತಮ ಸಂಸ್ಕಾರ ಪಡೆದುಕೊಳ್ಳಬೇಕು. ಜ್ಞಾನ ಮತ್ತು ಸಂಸ್ಕಾರಗಳಿಂದ ಮಹಿಳೆಯರ ರಕ್ಷಣೆ ಸಾಧ್ಯ ಎಂದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್.ಷಡಕ್ಷರಿ ಮಾತನಾಡಿ, ಭಾರತದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವಿದೆ. ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡಬೇಕೇ ಹೊರತು ಕಿಳರಿಮೆಯಿಂದಲ್ಲ. ಹೆಣ್ಣನ್ನು ಗೌರವಿಸುವ ಸಮಾಜ ಸೃಷ್ಟಿಯಾಗಬೇಕು ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಟಿ.ಥಾಮಸ್ ಮಾತನಾಡಿ, ಹೆಣ್ಣು ಮಕ್ಕಳು ಮೊದಲು ತಮ್ಮ ಸಾಮರ್ಥ್ಯದ ಬಗ್ಗೆ ಆತ್ಮವಿಶ್ವಾಸ ಹೊಂದಿರಬೇಕು. ನಮ್ಮಿಂದ ಎಲ್ಲ ಕೆಲಸಗಳನ್ನೂ ಸಾಧಿಸಲು ಸಾಧ್ಯ ಎಂಬ ಮನೋಪ್ರವೃತ್ತಿ ಬೆಳೆಸಿಕೊಂಡು ಸಮಾನತೆ ಮತ್ತು ಒಗ್ಗಟಿನಿಂದ ಸಮಾಜದಲ್ಲಿ ಬದುಕಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net