ಅನ್ಯಾಯ ವಿರೋಧಿಸುವ ಗುಣ ಬೆಳೆಸಿಕೊಳ್ಳಿ : ವಕೀಲೆ ರೇಖಾ ಡಿ.ಹೆಗ್ಡೆ ಕರೆ

New Project
Published on

ಮೂಡುಬಿದಿರೆ: ಹೆಣ್ಣು ಮಕ್ಕಳಿಗೆ ಮನೆಯಲ್ಲಿ ಮತ್ತು ಶಾಲೆಯಲ್ಲಿ ಗೌರವ ಕೊಡುವ ಶಿಕ್ಷಣವನ್ನು ಮಕ್ಕಳಿಗೆ ಚಿಕ್ಕಂದಿನಲ್ಲೆ ಕಲಿಸಿಕೊಟ್ಟಾಗ ಸಮಾಜದಲ್ಲೂ ಆಕೆಗೆ ಗೌರವ ಸಿಗುತ್ತದೆ. ಆಕೆಯ ಮೇಲಾಗುವ ಬೇರೆ ಬೇರೆ ರೀತಿಯ ದೌರ್ಜನ್ಯಗಳ ತಡೆಗೆ ಸರ್ಕಾರ ಕಾನೂನುಗಳನ್ನು ಜಾರಿಗೊಳಿಸಿದ್ದು, ತಮಗೆ ಅನ್ಯಾಯವಾದಾಗ ಧೈರ್ಯದಿಂದ ವಿರೋಧಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಾರ್ಕಳದ ವಕೀಲೆ ರೇಖಾ ಡಿ.ಹೆಗ್ಡೆ ಹೇಳಿದರು.

ಕೋಟೆಬಾಗಿಲು ವೀರಮಾರುತಿ ದೇವಸ್ಥಾನ ಹಾಗೂ ದ.ಕ. ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಸಹಯೋಗದಲ್ಲಿ ದ.ಕ. ಜಿಲ್ಲಾ ಹೆಗ್ಗಡೆ ಮಹಿಳಾ ಘಟಕದ ವತಿಯಿಂದ ವೀರಮಾರುತಿ ಸಭಾಭವನದಲ್ಲಿ ಭಾನುವಾರ ಆಯೋಜಿಸಲಾದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ದ.ಕ. ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಸದಸ್ಯೆ ಲೀಲಾವತಿ ಆರ್.ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಹೆಗ್ಗಡೆ ಮಹಿಳಾ ಘಟಕ ಅಧ್ಯಕ್ಷೆ ಶಾಂತಾ ಸನತ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಘಟಕದ ಮೂಡುಬಿದಿರೆ ವಲಯ ಅಧ್ಯಕ್ಷೆ ಉಷಾ ಕೆ.ಹೆಗ್ಡೆ, ನಾರಾವಿ ವಲಯ ಅಧ್ಯಕ್ಷೆ ನವ್ಯ ಪಿ.ಹೆಗ್ಡೆ, ಹೆಬ್ರಿ ವಲಯ ಅಧ್ಯಕ್ಷೆ ಸುನೀತಾ ಎ.ಹೆಗ್ಡೆ, ವೇಣೂರು ವಲಯ ಅಧ್ಯಕ್ಷೆ ಸುಭಾಶಿಣಿ ವಿ.ಹೆಗ್ಡೆ, ದ.ಕ. ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಅಧ್ಯಕ್ಷ ನವೀನ್ ಹೆಗ್ಡೆ ಮತ್ತು ವೀರಮಾರುತಿ ದೇವಸ್ಥಾನದ ಆಡಳಿತ ಮೊಕ್ತೇಸರ ಉದಯ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು. ಜಿಲ್ಲಾ ಘಟಕ ಕಾರ್ಯದರ್ಶಿ ಮಮತಾ ಆರ್.ಹೆಗ್ಡೆ ವಂದಿಸಿದರು. ಚೇತನಾ ಆರ್.ಹೆಗ್ಡೆ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net