ಅವಕಾಶಗಳ ಸದ್ಬಳಕೆ ಅವಶ್ಯ : ಮೂಡುಬಿದಿರೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪ್ರತಿಭಾ ಅಭಿಮತ

New Project
Published on

ಮೂಡುಬಿದಿರೆ: ಆರ್ಥಿಕವಾಗಿ, ಸಾಮಾಜಿಕವಾಗಿ, ಬೌದ್ಧಿಕವಾಗಿ ಮಹಿಳೆ ಸಬಲಳಾಗಬೇಕು ಎನ್ನುವ ಉದ್ದೇಶದಿಂದ ಮಹಿಳಾ ದಿನ ಆಚರಣೆಗೆ ಬಂತು. ಮಹಿಳೆಯರಿಗಾಗಿ ಸರ್ಕಾರದ ಹಲವು ಯೋಜನೆಗಳು, ಕಾನೂನಿನಲ್ಲಿ ಹಲವು ಅವಕಾಶಗಳಿವೆ ಎಂದು ಮೂಡುಬಿದಿರೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪ್ರತಿಭಾ ಹೇಳಿದರು.

ಬಂಟರ ಸಂಘ ಮಹಿಳಾ ಘಟಕ ಆಶ್ರಯದಲ್ಲಿ ಮೂಡುಬಿದಿರೆ ಕನ್ನಡ ಭವನದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಘಟಕ ಅಧ್ಯಕ್ಷೆ ಶೋಭಾ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಸೌಮ್ಯಾ ಶೆಟ್ಟಿ ಉಪಸ್ಥಿತರಿದ್ದರು. ಮಹಿಳೆಯರಿಗಾಗಿ ನಡೆದ ಆಟೋಟ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯದರ್ಶಿ ಅನಿತಾ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net