ಸೆ.೨೮ ಮಹಿಳಾ ದಸರಾ ಸಂಭ್ರಮ

mahila dasara
Published on

ಮಡಿಕೇರಿ: ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮಂಜಿನ ನಗರಿ ಮಡಿಕೇರಿಯಲ್ಲಿ ೮ನೇ ವರ್ಷದ ಮಹಿಳಾ ದಸರಾ ಏರ್ಪಡಿಸಲಾಗಿದ್ದು ಸೆ.೨೮ರ ಭಾನುವಾರದಂದು ನಡೆಯಲಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಬೆಳಿಗ್ಗೆ ೯.೩೦ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟನೆ ಮಾಡಲಿದ್ದಾರೆ. ನಗರಸಭೆ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷೆ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳೆಯರ ಸ್ಪರ್ಧಾ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸ್ದಸಯೆ ವೀಣಾ ಅಚ್ಚಯ್ಯ, ಕೂಡಿಗೆ ಕ್ರೀಡಾ ಶಾಲೆ ನಿವೃತ್ತ ಪ್ರಾಂಶುಪಾಲೆ ಕುಮತಿ ಬೋಪಯ್ಯ, ನಗರ ದಸರಾ ಸಮಿತಿ ಖಜಾಂಚಿ ಸಬಿತಾ ವಿಜಯ್, ದಸರಾ ಸಾಂಸ್ಕೃತಿಕ ಸಮಿತಿ ಉಸ್ತುವಾರಿ ಅನಿತಾ ಪೂವಯ್ಯ, ಸಾಧನಾ ಮಹಿಳಾ ಸಹಕಾರ ಸಂಘದ ನಿರ್ದೇಶಕಿ ಪುಷ್ಪಾವತಿ, ಮಡಿಕೇರಿ ನಗರ ಪೊಲೀಸ್ ಠಾಣಾ ಆರಕ್ಷಕ ನಿರೀಕ್ಷಕಿ ಎಸ್.ಅನ್ನಪೂರ್ಣ ಇತರರು ಪಾಲ್ಗೊಳ್ಳಲಿದ್ದಾರೆ.

ಮಹಿಳಾ ದಸರಾ ಸಂಭ್ರಮದಲ್ಲಿ ಉತ್ತಮ ಸೇವೆ ಸಲ್ಲಿಸುವದರೊಂದಿಗೆ ಸಾಧನೆ ಮಾಡಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ, ಪೌರಸೇವಾ ನೌಕರರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಸಂಜೆ ೬ ಗಂಟೆಯಿಂದ ಕಲಾ ಸಂಭ್ರಮ ವೇದಿಕೆಯಲ್ಲಿ ಮಹಿಳೆಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬರಲಿವೆ ಎಂದು ಸಂತೋಷ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net