ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯರ ಚಿನ್ನಾಭರಣ ಕಳವು

Mcggan hospital
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ
Published on

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಆಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿವೆ.

ಆಸ್ಪತ್ರೆಗೆ ಆಗಮಿಸುವ ರೋಗಿಗಳ ಬ್ಯಾಗ್‌ಗಳಿಂದ ಚಿನ್ನಾಭರಣ, ನಗದು ಅಪಹರಿಸಿ ಪರಾರಿಯಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ. ಚೀಟಿ ಮಾಡಿಸುವ ವೇಳೆ ಹಾಗೂ ಜನಜಂಗುಳಿ ಹೆಚ್ಚಿರುವ ಸ್ಥಳಗಳಲ್ಲಿಯೇ ರೋಗಿಗಳು ಹಾಗೂ ಮತ್ತವರ ಕಡೆಯವರ ಬಳಿಯಿಂದ ಚಿನ್ನಾಭರಣ, ನಗದು ಕಳವು ಮಾಡಲಾಗುತ್ತಿದೆ.

ಇತ್ತೀಚೆಗೆ ಆಸ್ಪತ್ರೆಗೆ ಆಗಮಿಸಿದ್ದ ಮೂವರು ಮಹಿಳೆಯರ ವ್ಯಾನಿಟಿ ಬ್ಯಾಗ್‌ಗಳಿಂದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ. ಒಬ್ಬರ ಬಳಿ 2.20 ಲಕ್ಷ ರೂ. ಮೌಲ್ಯದ 44 ಗ್ರಾಂ ಚಿನ್ನಾಭರಣ, ಮತ್ತೊಬ್ಬರ ಬಳಿ 3 ಸಾವಿರ ರೂ. ನಗದು ಮತ್ತು ಕಳವು ಮಾಡಿದ ಎಟಿಎಂ ಕಾರ್ಡ್ ಮೂಲಕ 23 ಸಾವಿರ ರೂ. ನಗದು ಬಿಡಿಸಿಕೊಳ್ಳಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಲಕ್ಷಾಂತರ ರೂ. ಮೌಲ್ಯದ 70.05 ಗ್ರಾಂ ತೂಕದ ಚಿನ್ನಾಭರಣ ಕಳವು ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net