

ಕುಷ್ಟಗಿ: ನೂತನ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾದ ಮೊದಲ ದಿನವೇ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ ಸ್ತ್ರೀ ಸಬಲೀಕರಣಕ್ಕೆ ದಿಟ್ಟ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರಕ್ಕೆ ದೇಶದ ಮಹಿಳೆಯರು ಆಭಾರಿಯಾಗಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಪರಿಮಳ ಶೆಟ್ಟರ್ ಹೇಳಿದರು.
ಮಹಿಳಾ ಮೀಸಲಾತಿ ಮಸೂದೆ ಮಂಡನೆ ಹಿನ್ನೆಲೆಯಲ್ಲಿ ಮಹಿಳಾ ಮೋರ್ಚಾದಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಂಭ್ರಮಾಚರಿಸಿ ಮಾತನಾಡಿದರು.
ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಮಸೂದೆ ಮಂಡಿಸಿರುವುದು ಸ್ವಾಗತಾರ್ಹ. ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಿರುವುದು ಸಂತಸ ತಂದಿದೆ ಎಂದರು.
ಬಿಜೆಪಿ ಮಂಡಲ ಅದ್ಯಕ್ಷ ಬಸವರಾಜ ಹಳ್ಳೂರು, ಜಿಪಂ ಮಾಜಿ ಸದಸ್ಯ ಕೆ.ಮಹೇಶ, ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ವಡಗೇರಿ, ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ್, ಶೈಲಜಾ ಬಾಗಲಿ, ಲಲಿತಾ ಮ್ಯಾಗಳಮನಿ, ಸುಮಾ ಹಿರೆಮಠ, ದ್ರಾಕ್ಷಾಯಣಿ ಕಟಗಿ, ನೀಲಮ್ಮ ಸೊಪ್ಪಿಮಠ ಇದ್ದರು.