ಮುಂಚೂಣಿಯಲ್ಲಿ ಸ್ತ್ರೀಶಕ್ತಿ ಸಂಘಗಳು

22SPT2
Published on

ಸೋಮವಾರಪೇಟೆ: ಸ್ತ್ರೀಶಕ್ತಿ ಸಂಘಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವುದರೊಂದಿಗೆ ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿವೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಮಲಾ ಹೇಳಿದರು.

ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಾಲ ಸ್ತ್ರೀಶಕ್ತಿ ಗುಂಪುಗಳಿಗೆ ಆಯೋಜಿಸಿರುವ ಪ್ಯಾಕಿಂಗ್, ಲೇಬಲ್ಲಿಂಗ್, ಸಾವಯವ ಉತ್ಪನ್ನ, ಡಿಜಿಟಲ್ ಸಾಕ್ಷರತೆ ಮತ್ತು ಕೌಟುಂಬಿಕ ದೌರ್ಜನ್ಯ ಸಂರಕ್ಷಣಾ ಕಾಯ್ದೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಸ್ತ್ರೀ ಶಕ್ತಿ ಸಂಘಗಳು ಬ್ಯಾಂಕಿಂಗ್ ಹಾಗೂ ತಂತ್ರಜ್ಞಾನದ ಯುಗದ ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳುವ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಯಾಂಕಿಂಗ್ ಕ್ಷೇತ್ರದ ಕಾರ್ಯಚಟುವಟಿಕೆಗಳ ಕುರಿತು ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ವ್ಯವಸ್ಥಾಪಕ ಪ್ರದೀಪ್ ಕುಮಾರ್ ಮಾಹಿತಿ ನೀಡಿದರು. ಮಾರುಕಟ್ಟೆ ವ್ಯವಸ್ಥೆ, ಉದ್ಯಮಶೀಲತೆ ಕುರಿತು ಜಿಲ್ಲಾ ತರಬೇತಿ ಕೇಂದ್ರದ ಉಪನ್ಯಾಸಕ ಹರೀಶ್ ತಿಳಿಸಿಕೊಟ್ಟರು. ವೇದಿಕೆಯಲ್ಲಿ ರಾಜ್ಯ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ರೆಹನಾ ಫಿರೋಜ್, ಸಂಪನ್ಮೂಲ ವ್ಯಕ್ತಿ ಜಿಲ್ಲಾ ತರಬೇತಿ ಕೇಂದ್ರದ ಕುಮಾರ್, ಕೃಷಿ ಇಲಾಖೆಯ ಅಧಿಕಾರಿ ಶಾರದಾ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ತಾಲೂಕು ಅಧ್ಯಕ್ಷೆ ಸುಮತಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net