

ಉಡುಪಿ: ಮಣಿಪಾಲ ಲಕ್ಷ್ಮೀಂದ್ರ ನಗರ ಸಮೀಪದ ಕಟ್ಟಡದಲ್ಲಿ ವುಡ್‌ಲ್ಯಾಂಡ್ ಪಾದರಕ್ಷೆ ಮಾರಾಟ ಮಳಿಗೆಯಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್‌ಶಾರ್ಟ್ ಸರ್ಕಿಟ್‌ನಿಂದ ದುರಂತ ಸಂಭವಿಸಿದ್ದು, ಲಕ್ಷಾಂತರ ರೂ, ಮೌಲ್ಯದ ಪಾದರಕ್ಷೆಗಳು ಸುಟ್ಟು ಹೋಗಿದೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಸ್ಥಳಕ್ಕೆ ಆಗಮಿಸಿ ಮುಂಜಾನೆ 4 ಗಂಟೆವರೆಗೂ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿಲ್ಲ.