ಪರಿಣಾಮಕಾರಿಯಾಗಿ ಕೆಲಸ ಮಾಡಿ

18Ckd1
Published on

ಚಿಕ್ಕೋಡಿ: ಸಿಬ್ಬಂದಿಗಳು ವಾಹನ ನಿರ್ವಹಣೆ ಹಾಗೂ ಬಸ್ ಕಾರ್ಯಾಚರಣೆ ಬಗ್ಗೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕೆಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನೀಲ ಹನುಮಣ್ಣವರ ಹೇಳಿದರು.

ಇಲ್ಲಿನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ ಹಾಗೂ ಬಸ್ ನಿಲ್ದಾಣಗಳಿಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿಬ್ಬಂದಿ ಕುಂದು ಕೊರತೆ ಆಲಿಸಿ ಅವರ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಹುಕ್ಕೇರಿ ಘಟಕದ ಆವರಣ ಕಾಂಕ್ರಿಟೀಕರಣ ಮಾಡಿಸಲು ಕ್ರಮ ಜರುಗಿಸಬೇಕೆಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್.ಮುಂಜಿ ಅವರಿಗೆ ನಿರ್ದೇಶನ ನೀಡಿದರು.

ಸಂಕೇಶ್ವರ ಹಾಗೂ ನಿಪ್ಪಾಣಿ ಘಟಕಗಳನ್ನು ಸಹ ಅಭಿವೃದ್ಧಿ ಪಡಿಸಿ ಸಾರ್ವಜನಿಕರಿಗೆ ಮೂಲ ಸೌಕರ್ಯ ಒದಗಿಸಿಕೊಡಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್.ಮುಂಜಿ, ಸಾರಿಗೆ ಅಧಿಕಾರಿ ಎ.ಆರ್.ಛಬ್ಬಿ, ಎ.ಎಸ್.ಅಡಳ್ಳಿಮಠ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net