

ಸಕಲೇಶಪುರ: ಜನಸಾಮಾನ್ಯರಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಕಾಲಹರಣ ಮಾಡದೆ ವೇಗವಾಗಿ ಕೆಲಸ ಮಾಡಿಕೊಡಬೇಕೆಂದು ಶಾಸಕ ಸಿಮೆಂಟ್ ಮಂಜು ಸೂಚಿಸಿದರು.
ಪಟ್ಟಣದ ಮಿನಿವಿಧಾನ ಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪಿಂಚಣಿ ಪ್ರಮಾಣ ಪತ್ರಗಳನ್ನು ವಿತರಿಸಿ ಮಾತನಾಡಿ, ಪಿಂಚಣಿ ಅದಾಲತ್ ಒಂದು ಉತ್ತಮವಾದ ಯೋಜನೆಯಾಗಿದೆ. ಸರ್ಕಾರ ವೃದ್ಧಾಪ್ಯ ವೇತನ ವಿಧವಾ ವೇತನ ಸೇರಿದಂತೆ ಇನ್ನು ಹಲವು ವೇತನಗಳನ್ನು ನೀಡುತ್ತಿದೆ. ಈ ವೇತನಗಳ ಹಣ ಕಡಿಮೆಯಾಗಿದ್ದರೂ ಸಹ ಇದೆ ಹಣವನ್ನ ಹಲವು ಕುಟುಂಬಗಳು ಜೀವನೋಪಾಯಕ್ಕಾಗಿ ನಂಬಿವೆ. ಈ ನಿಟ್ಟಿನಲ್ಲಿ ಹಿರಿಯ ನಾಗರಿಕರಿಗೆ ವೇಗವಾಗಿ ಅಧಿಕಾರಿಗಳು ಕೆಲಸ ಮಾಡಿಕೊಡಬೇಕೆಂದು ಹೇಳಿದರು.
ತಹಸೀಲ್ದಾರ್ ಮೇಘನಾ ಮಾತನಾಡಿ, ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಕೆಲವರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡದ ಕಾರಣ ಪಿಂಚಣಿಗಳು ಬರುವುದು ರದ್ದಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಲು ಮುಂದಾಗಬೇಕು ಎಂದರು. ಉಪತಹಸೀಲ್ದಾರ್ ಮೋಹನ್, ಶಿರಸ್ತೇದಾರ್ ಉಮೇಶ್ ಸೇರಿದಂತೆ ಇತರರು ಹಾಜರಿದ್ದರು.