ಭಾವೈಕ್ಯ, ಸೌಹಾರ್ದಕ್ಕಾಗಿ ಕಾರ್ಯ, ಕಾವೂರು ಕಾಲೇಜು ಪ್ರಾಂಶುಪಾಲಡಾ.ಶಿವರಾಮ ಪಿ ಆಶಯ

kkav
ಕಾವೂರು ಪ್ರಥಮದರ್ಜೆ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಿಸಲಾಯಿತು. ಪ್ರಾಂಶುಪಾಲ ಡಾ.ಶಿವರಾಮ ಪಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸಂತೋಷ್ ಪಿಂಟೊ, ಸಹಾಯಕ ಪ್ರಾಧ್ಯಾಪಕಿ ಪ್ರಮೀಳಾ ಕೆ. ಮೊದಲಾದವರು ಹಾಜರಿದ್ದರು.
Published on

ಮಂಗಳೂರು: ಕಾವೂರು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ ಇತ್ತೀಚೆಗೆ ಸದ್ಭಾವನಾ ದಿನ ಆಚರಿಸಲಾಯಿತು.

ಪ್ರಾಂಶುಪಾಲ ಡಾ.ಶಿವರಾಮ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತಿ, ಧರ್ಮ, ಪ್ರದೇಶ ಅಥವಾ ಭಾಷೆಯ ಭೇದಭಾವವಿಲ್ಲದೆ ಭಾರತದ ಎಲ್ಲರೂ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಕಾರ್ಯಕ್ರಮ ಸಂಯೋಜಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸಂತೋಷ್ ಪಿಂಟೊ ಪ್ರತಿಜ್ಞೆ ಬೋಧಿಸಿದರು. ಸವಿತಾ ಮತ್ತು ತಂಡದವರು ಸೌಹಾರ್ದ ಗೀತೆ ಹಾಡಿದರು. ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರಮೀಳಾ ಕೆ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net